ಮಂಗಳೂರು:- ಬೆಳ್ಳಂ ಬೆಳಗ್ಗೆ ಮಂಗಳೂರು ಜೈಲ್ ಮೇಲೆ ಪೊಲೀಸರು ದಾಳಿ ಮಾಡಿದ್ದಾರೆ. ದಾಳಿ ವೇಳೆ ಗಾಂಜಾ, ಡ್ರಗ್ಸ್, ಮೊಬೈಲ್ ಜಪ್ತಿ ಮಾಡಿದ್ದಾರೆ.
ದಾಳಿ ವೇಳೆ ಇಪ್ಪತ್ತೈದು ಮೊಬೈಲ್, ಒಂದು ಬ್ಲೂ ಟೂತ್ ಡಿವೈಸ್, ಐದು ಇಯರ್ ಫೋನ್, ಒಂದು ಪೆನ್ ಡ್ರೈವ್, ಐದು ಚಾರ್ಜರ್, ಒಂದು ಕತ್ತರಿ ಸೇರಿದಂತೆ ವಿವಿಧ ವಸ್ತುಗಳು ಸಿಕ್ಕಿದ್ದು ಪೊಲೀಸರು ಆ ವಸ್ತುಗಳನ್ನು ವಶಕ್ಕೆ ಪಡೆದಿದ್ದಾರೆ. ಜೊತೆಗೆ ಜೈಲು ಖೈದಿಗಳ ಜೊತೆಗಿದ್ದ ಗಾಂಜಾ ಮತ್ತು ಡ್ರಗ್ಸ್ ಪ್ಯಾಕೇಟ್ಗಳನ್ನು ಕೂಡಾ ವಶಕ್ಕೆ ಪಡೆಯಲಾಗಿದೆ. ಮುಂಜಾನೆ ನಾಲ್ಕು ಗಂಟೆಯ ವೇಳೆಗೆ ಜೈಲಿನ ಮೇಲೆ ಏಕಕಾಲದಲ್ಲಿ ನೂರೈವತ್ತಕ್ಕೂ ಅಧಿಕ ಪೊಲೀಸರು ದಾಳಿ ಮಾಡಿದರು.
ಡ್ರಗ್, ಗಾಂಜಾ ಪತ್ತೆ ಹಿನ್ನೆಲೆಯಲ್ಲಿ ಮಂಗಳೂರು ಪೊಲೀಸ್ ಕಮಿಷನರ್ ಅನುಪಮ್ ಅಗರ್ ವಾಲ್ ತನಿಖೆಗೆ ಆದೇಶ ನೀಡಿದ್ದಾರೆ
ಪೊಲೀಸ್ ಕಮಿಷನರ್ ಮಾರ್ಗದರ್ಶನದಲ್ಲಿ ಇಬ್ಬರು ಡಿಸಿಪಿ, ಮೂವರು ಎಸಿಪಿ, 15 ಇನ್‌ಸ್ಪೆಕ್ಟರ್, 150 ಕ್ಕೂ ಹೆಚ್ಚು ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು