ಉಡುಪಿ:- ಜಿಲ್ಲೆಯ ಕಾರ್ಕಳ ತಾಲೂಕಿನಲ್ಲಿ ಯಕ್ಷಗಾನ ಪ್ರದರ್ಶನಕ್ಕೆ ಪೊಲೀಸರು ತಡೆ ಒಡ್ಡಿದ ಘಟನೆ ಜರುಗಿದೆ.
ಜಿಲ್ಲೆಯ ಕಾರ್ಕಳ ತಾಲೂಕಿನ ಶಿರ್ಲಾಲುನಲ್ಲಿ ಮೈಕ್ ಹಚ್ಚಲು ಅನುಮತಿ ಪಡೆದಿಲ್ಲ ಎಂದು ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗಲೇ ಪೊಲೀಸರಿಂದ ತಡೆದಿರುವಂತಹ ಘಟನೆ ನಡೆದಿದೆ. 10 ಗಂಟೆ ನಂತರ ಧ್ವನಿವರ್ಧಕ ಬಳಸಿದ್ದಕ್ಕೆ ಯಕ್ಷಗಾನ ತಡೆಯಲಾಗಿದ್ದು, ಆಯೋಜಕರನ್ನು ಅರೆಸ್ಟ್ ಮಾಡಲು ಮುಂದಾದಾಗ ಎಲ್ಲಾ ಗ್ರಾಮಸ್ಥರನ್ನು ಬಂಧನ ಮಾಡಿ ಎಂದು ಸ್ಥಳದಲ್ಲಿ ಹೈಡ್ರಾಮಾವೇ ನಡೆದಿದೆ.
10 ಗಂಟೆ ನಂತರ ಧ್ವನಿವರ್ಧಕ ಬಳಸಿದ್ದಕ್ಕೆ ಅಜೆಕಾರು ಠಾಣಾ ಉಪ ನಿರೀಕ್ಷಕ ಶುಭಕರ ಅವರಿಂದ ಆಕ್ಷೇಪ ವ್ಯಕ್ತಪಡಿಸಿದ್ದರು. ಈ ವೇಳೆ ಗ್ರಾಮಸ್ಥರು ಹಾಗೂ ಪೊಲೀಸರ ನಡುವೆ ಮಾತಿನ ಚಕಮಕಿ ನಡೆದಿದ್ದು, ದೂರು ದಾಖಲಾದ ಬಗ್ಗೆ ಎಫ್ಐಆರ್ ತೋರಿಸಿ ಎಂದು ಗ್ರಾಮಸ್ಥರು ಆಗ್ರಹಿಸಿದರು. ಸಾರ್ವಜನಿಕರ ಆಕ್ರೋಶ ವ್ಯಕ್ತವಾಗುತ್ತಿದ್ದಂತೆ ಪೊಲೀಸ್ ಸ್ಥಳದಿಂದ ತೆರಳಿದ್ದಾರೆ ಎಂದು ತಿಳಿದು ಬಂದಿದೆ.