ನಕಲಿ ಬ್ರಾಂಡೆಡ್ ಜೀನ್ಸ್ ತಯಾರಿಕಾ ಅಡ್ಡೆ ಮೇಲೆ ಖಾಕಿ ದಾಳಿ: ಲಕ್ಷಾಂತರ ಮೌಲ್ಯದ ಉತ್ಪನ್ನ ಸೀಜ್!

0
Spread the love

ಬೆಂಗಳೂರು:- ನಗರದಲ್ಲಿ ನಕಲಿ ಬ್ರಾಂಡೆಡ್ ಜೀನ್ಸ್ ತಯಾರಿಕಾ ಅಡ್ಡೆ ಮೇಲೆ ಪೊಲೀಸರು ದಾಳಿ ನಡೆಸಿ ಸುಮಾರು 30 ಲಕ್ಷಕ್ಕೂ ಅಧಿಕ ಮೌಲ್ಯದ ಜೀನ್ಸ್ ಸೀಜ್ ಮಾಡಿರುವ ಘಟನೆ ಮಾದನಾಯಕನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಜರುಗಿದೆ.

Advertisement

ಶನಿವಾರ ತಡರಾತ್ರಿ ನಕಲಿ ಬ್ರಾಂಡೆಡ್ ಜೀನ್ಸ್ ತಯಾರಿಕಾ ಅಡ್ಡೆ ಮೇಲೆ ಮಾದನಾಯಕನಹಳ್ಳಿ ಪೊಲೀಸರು ದಾಳಿ ನಡೆಸಿ ಪೂಮಾ, ನೈಕಿ ಬ್ರಾಂಡ್‌ನ ಲಕ್ಷಾಂತರ ಮೌಲ್ಯದ ನಕಲಿ ಉತ್ಪನ್ನ ಸೀಜ್ ಮಾಡಿದ್ದಾರೆ. ಅಲ್ಲದೇ ಲೆವಿಸ್, ಪೋಲೋ, ರಾಲ್ಫ್ ಲಾರೆನ್ ಬ್ರಾಂಡ್ ಜೀನ್ಸ್ ನಕಲು ತಯಾರಿಸಿ ಮಾರಾಟ ಮಾಡುತ್ತಿರುವುದು ಬೆಳಕಿಗೆ ಬಂದಿದೆ.

ಎ.ಎ.ಫ್ಯಾಷನ್ಸ್ ಹೆಸರಿನಲ್ಲಿ ಬ್ರಾಂಡೆಡ್ ಜೀನ್ಸ್ ನಕಲಿ ತಯಾರಿಕೆ ಮಾಡಲಾಗುತ್ತಿತ್ತು. ಲೈಸೆನ್ಸ್ ಇಲ್ಲದೇ ಅಕ್ರಮವಾಗಿ ಗೋಡೌನ್‌ನಲ್ಲಿ ಬ್ರಾಂಡೆಡ್ ಬಟ್ಟೆಗಳ ನಕಲಿ ಪೀಸ್ ತಯಾರಿಕೆ ನಡೆಯುತ್ತಿತ್ತು. ಈ ಹಿನ್ನೆಲೆ ಮಾದನಾಯಕನಹಳ್ಳಿ ವ್ಯಾಪ್ತಿಯ ಬೈಲಕೋನೇನಹಳ್ಳಿಯಲ್ಲಿ ಪೊಲೀಸ್ ದಾಳಿ ನಡೆಸಿ ನಕಲಿ ಜೀನ್ಸ್‌ಗಳನ್ನು ವಶಪಡಿಸಿಕೊಂಡಿದ್ದಾರೆ.


Spread the love

LEAVE A REPLY

Please enter your comment!
Please enter your name here