ದೇವನಹಳ್ಳಿ:- ವೀಲ್ಹಿಂಗ್ ಮಾಡುತ್ತಿದ್ದ ಪುಂಡರಿಗೆ ಬಿಸಿ ಮುಟ್ಟಿಸಿರುವ ಪೊಲೀಸರು, 15 ಪುಂಡರನ್ನು ಅರೆಸ್ಟ್ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.
Advertisement
ಇನ್ಸ್ಪೆಕ್ಟರ್ ರಾಘವೇಂದ್ರ ನೇತೃತ್ವದಲ್ಲಿ ಈ ಕಾರ್ಯಾಚರಣೆ ನಡೆದಿದ್ದು, ಬಂಧಿತರಿಂದ ಬರೋಬ್ಬರಿ 25 ದ್ವಿಚಕ್ರ ವಾಹನಗಳನ್ನು ಪೊಲೀಸರು ಸೀಜ್ ಮಾಡಿದ್ದಾರೆ. ಆರೋಪಿಗಳು, ದೇವನಹಳ್ಳಿಯ ನಂದಿಬೆಟ್ಟದ ರಸ್ತೆಯಲ್ಲಿ ವೀಲ್ಹಿಂಗ್ ಮಾಡಿ ಇತರೆ ಸವಾರರಿಗೆ ತೊಂದರೆ ನೀಡುತ್ತಿದ್ದರು.
ಇದರ ಮಾಹಿತಿ ಆಧರಿಸಿ ಕಾರ್ಯಚರಣೆ ನಡೆಸಿದ ಪೊಲೀಸರು, ಪುಂಡರನ್ನು ಅರೆಸ್ಟ್ ಮಾಡಿದ್ದಾರೆ. ಬಂಧಿತರಿಂದ ವಿವಿಧ ರೀತಿಯ ಬೈಕ್ ಗಳನ್ನು ಸೀಜ್ ಮಾಡಿ ತನಿಖೆ ಮಾಡಿದ್ದಾರೆ.