ಬೆಳಗಾವಿ: ವಿಧಾನ ಪರಿಷತ್ ಸದಸ್ಯ ಸಿಟಿ ರವಿ ಬಂಧನ ಪ್ರಕರಣಕ್ಕೆ ಸಂಬಂಧಿಸಿದಂತೆ ಖಾನಾಪುರ ಠಾಣೆಯ ಸಿಪಿಐ ಮಂಜುನಾಥ್ ನಾಯಕ್ ಅವರನ್ನು ಅಮಾನತು ಮಾಡಿದ್ದಾರೆ. ಇನ್ನೂ ಸಂಬಂಧ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಸಚಿವ ಜಿ ಪರಮೇಶ್ವರ್, ಖಾನಾಪುರ ಸಿಪಿಐ ಅಮಾನತು ಇಲಾಖೆ ಅಧಿಕಾರಿಗಳ ನಿರ್ಧಾರವಾಗಿದೆ. ಈ ವಿಚಾರದಲ್ಲಿ ಯಾವುದೇ ಕಾರಣಕ್ಕೂ ಸರ್ಕಾರ ಮಧ್ಯಪ್ರವೇಶ ಮಾಡುವುದಿಲ್ಲ ಎಂದರು.
Advertisement
ಇನ್ನೂ ಬೆಳಗಾವಿ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ನಡೆದ ಸಭೆ ಕುರಿತು ಪ್ರತಿಕ್ರಿಯೇ ನೀಡಿದ ಅವರು, ಸಭೆಯಲ್ಲಿ ಸಿ.ಟಿ.ರವಿ ಪ್ರಕರಣದ ಬಗ್ಗೆ ಯಾವುದೇ ಚರ್ಚೆ ಮಾಡಿಲ್ಲ. ಪ್ರಕರಣದ ಬಗ್ಗೆ ಸಿಐಡಿ ತನಿಖೆ ನಡೆಸುತ್ತಿದೆ. ತನಿಖಾ ಹಂತದಲ್ಲಿ ಇರುವಾಗ ನಾನು ಆ ಬಗ್ಗೆ ಮಾತನಾಡುವುದಿಲ್ಲ ಎಂದು ಹೇಳಿದರು.