ಧಾರವಾಡ: ಖರ್ಗೆ ಸೈಟ್ ವಾಪಸ್ ಕೊಟ್ಟಿದ್ದಾರೆ ಎಂದರೆ ಅದು ಅವರ ದೊಡ್ಡ ಗುಣ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದರು. ಧಾರವಾಡದಲ್ಲಿ ಮಾತನಾಡಿದ ಅವರು, ಎಷ್ಟೋ ಕೇಸ್‌ಗಳಲ್ಲಿ ಅಮಾಯಕರನ್ನು ಒಳಗೆ ಹಾಕಲಾಗಿತ್ತು. ಮನೆ ಹುಡುಕಿಕೊಂಡು ಬಂದು ಕೇಸ್ ಹಾಕಿರುವ ಉದಾಹರಣೆ ಕೂಡ ಇದೆ. ಖರ್ಗೆ ಸೈಟ್ ವಾಪಸ್ ಕೊಟ್ಟಿದ್ದಾರೆ ಎಂದರೆ ಅದು ಅವರ ದೊಡ್ಡ ಗುಣ.
Advertisement
ಅದಕ್ಕೆ ಬಿಜೆಪಿಯವರು ಖುಷಿಯಾಗಬೇಕು. ಅದಕ್ಕೆ ಯಾಕೆ ರಾಜೀನಾಮೆ ಕೇಳಬೇಕು? ಪ್ರೇರಣಾ ಟ್ರಸ್ಟ್ಗೆ ದುಡ್ಡು ಬಂದ ಮೇಲೆಯೇ ಯಡಿಯೂರಪ್ಪ ಅವರನ್ನು ಸಿಎಂ ಮಾಡಿದ್ದರು. ಯಾಕೆ ಮಾಡಿದ್ದು ಎಂದರೆ ಅವರ ಬಳಿ ವಾಷಿಂಗ್ ಮಶಿನ್ ಇದೆ ಅದರಲ್ಲಿ ಹಾಕಿದ ತಕ್ಷಣ ಎಲ್ಲರೂ ಬೆಳ್ಳಗೆ ಆಗುತ್ತಾರೆ ಎಂದು ಲೇವಡಿ ಮಾಡಿದರು.