ಬೆಂಗಳೂರು:– ಕುಮಾರಸ್ವಾಮಿ ಲೇಔಟ್ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ರಸ್ತೆ ದಾಟುವಾಗ ವೇಗವಾಗಿ ಬಂದ ಬಿಬಿಎಂಪಿ ಕಸದ ಲಾರಿ ಡಿಕ್ಕಿ ಹೊಡೆದು ವೃದ್ಧೆ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಜರುಗಿದೆ.
Advertisement
ಆದಿ ಲಕ್ಷ್ಮಮ್ಮ (69) ಮೃತ ದುರ್ದೈವಿ. ಅಪಘಾತ ಸಂಬಂಧ ಬಿಬಿಎಂಪಿ ಕಸದ ಲಾರಿ ಚಾಲಕ ಮೊಹಮ್ಮದ್ ಎಂಬಾತನ ವಶಕ್ಕೆ ಪಡೆದು ವಿಚಾರಣೆಗೆ ಒಳ ಪಡಿಸಲಾಗಿದೆ. ತಾಯಿ ಮತ್ತು ಮಗಳು ಚಿತ್ತೂರಿಗೆ ತೆರಳಲು ಸೋಮವಾರ ಬೆಳಗ್ಗೆ 6ಕ್ಕೆ ಜಂಬೂಸವಾರಿ ದಿಣ್ಣೆ ಬಸ್ ನಿಲ್ದಾಣದ ಬಳಿ ಬಂದಿದ್ದಾರೆ.
ಈ ವೇಳೆ ಬಸ್ ಬಂದ ತಕ್ಷಣ ಮಗಳು ಓಡಿ ಹೋಗಿ ಬಸ್ ಹತ್ತಿದ್ದಾರೆ. ಆದಿಲಕ್ಷ್ಮಮ್ಮ ಬಸ್ ಹತ್ತಲು ರಸ್ತೆ ದಾಟುವಾಗ ವೇಗವಾಗಿ ಬಂದ ಬಿಬಿಎಂಪಿ ಕಸದ ಲಾರಿ ಡಿಕ್ಕಿ ಹೊಡೆದಿದೆ. ಕೂಡಲೇ ವೃದ್ಧೆ ಸಾವನ್ನಪ್ಪಿದ್ದಾರೆ.