ಬೆಂಗಳೂರು:- ಕಿಲ್ಲರ್ ಬಿಎಂಟಿಸಿ ಬಸ್ ಗೆ ಮತ್ತೊಂದು ಜೀವ ಬಲಿಯಾಗಿರುವ ಘಟನೆ ನಗರದಲ್ಲಿ ಜರುಗಿದೆ.
Advertisement
ಮಡಿವಾಳದ ಪೊಲೀಸ್ ಠಾಣೆ ಮುಂಭಾಗದಲ್ಲೇ ನಡೆದುಕೊಂಡು ಬರ್ತಿದ್ದ ವೃದ್ಧನಿಗೆ ಬಿಎಂಟಿಸಿ ಬಸ್ ಡಿಕ್ಕಿ ಹೊಡೆದಿದೆ. ವೃದ್ಧನ ತಲೆ ಮೇಲೆಯೇ ಬಸ್ ಹರಿದಿದ್ದು, ಆತ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.
ಮಡಿವಾಳ ನಿವಾಸಿ ವೆಂಕಟರಾಮಯ್ಯ ಮೃತ ದುರ್ದೈವಿ ಆಗಿದ್ದಾರೆ. ಮಡಿವಾಳ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆಗೆ ಚಾಲಕನ ನಿರ್ಲಕ್ಷ್ಯವೇ ಕಾರಣ ಎಂದು ಜನರು ಅಕ್ರೋಶ ಹೊರಹಾಕಿದ್ದಾರೆ.


