ಬೆಂಗಳೂರು:- ಶೀಘ್ರದಲ್ಲೇ ಕಿಯೋನಿಕ್ಸ್ ಹಗರಣದಲ್ಲಿ ಭಾಗಿಯಾದವರ ವಿರುದ್ದ ಶಿಸ್ತು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಶಾಸಕ ಶರತ್ ಬಚ್ಚೇಗೌಡ ಹೇಳಿದ್ದಾರೆ.
ನಗರದಲ್ಲಿ ಕಿಯೋನಿಕ್ಸ್ ವೆಂಡರ್ಸ್ ದಯಾಮರಣಕ್ಕೆ ಪತ್ರ ಬರೆದಿರುವ ಕುರಿತು ಪ್ರತಿಕ್ರಿಯಿಸಿದ ಅವರು, ಕಿಯೋನಿಕ್ಸ್ ಹಗರಣದಲ್ಲಿ ಭಾಗಿಯಾದವರ ವಿರುದ್ದ ಶಿಸ್ತು ಕ್ರಮ ಜರುಗಿಸಲಾಗುವುದು. ಅಕೌಂಟೆಂಟ್ ಜನರಲ್ ವರದಿಯಲ್ಲಿ ಸರ್ಕಾರದ ಖಜಾನೆಗೆ ನೂರಾರು ಕೋಟಿ ನಷ್ಟ ಆಗಿದೆ. ಮಹೇಶ್ವರ್ ರಾವ್ ಕಮಿಟಿ ವರದಿ ಪಡೆದು ಬಿಲ್ ಕ್ಲಿಯರ್ ಮಾಡುತ್ತೇವೆ. ಸಾರ್ವಜನಿಕರ ಹಣ ಬಳಸಿ ಅನುದಾನ ನೀಡ್ತಿದ್ದೇವೆ. ಬೆಲೆ ನಿಗದಿ ವಿಚಾರದಲ್ಲೂ ಮಾರ್ಕೆಟ್ ಬೆಲೆಗಿಂದ ಹೆಚ್ಚಿನ ಬೆಲೆಗೆ ಸಪ್ಲೈ ಮಾಡಿರುವ ಆರೋಪ ಇದೆ.
ಶೀಘ್ರವಾಗಿ ಹಣ ಬಿಡುಗಡೆಗೆ ಕ್ರಮವಹಿಸಲಾಗುವುದು. ಇನ್ನೂ ಕಿಯೋನಿಕ್ಸ್ ಹಗರಣದಲ್ಲಿ ಭಾಗಿಯಾದವರ ವಿರುದ್ದ ಶಿಸ್ತು ಕ್ರಮ ಜರುಗಿಸಲಾಗುವುದು. 2021, 22, 23ನೇ ಸಾಲಿನ ಮೂರು ವರ್ಷದ ಖರ್ಚು ವೆಚ್ಚಗಳ ಪರಿಶೀಲನೆ ನಡೆಯುತ್ತಿದೆ ಎಂದು ತಿಳಿಸಿದರು.



