ಬೆಂಗಳೂರು: ಇತ್ತೀಚಿಗೆ ಬೆಂಗಳೂರಿನ ರಸ್ತೆ ಗುಂಡಿಗಳ ಕುರಿತಾಗಿ ಉದ್ಯಮಿ, ಬಯೋಕಾನ್ ಮುಖ್ಯಸ್ಥೆ ಕಿರಣ್ ಮಜುಂದಾರ್ ಶಾ ಅವರು ಕಟುವಾಗಿ ಟೀಕೆ ಮಾಡಿದ್ದರು. ಈ ಮಧ್ಯೆ ಇಂದು ಬಯೋಕಾನ್ ಮುಖ್ಯಸ್ಥೆ ಕಿರಣ್ ಮಜುಂದಾರ್ ಶಾ ಇಂದು ಡಿಸಿಎಂ ಡಿಕೆ ಶಿವಕುಮಾರ್ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.
Advertisement
ಡಿಕೆಶಿಯ ಸದಾಶಿವನಗರದ ನಿವಾಸಕ್ಕೆ ಆಗಮಿಸಿದ ಅವರು ದೀಪಾವಳಿ ಹಬ್ಬದ ಶುಭಾಶಯ ತಿಳಿಸಿ ಸುಮಾರು 40 ನಿಮಿಷಗಳ ಕಾಲ ಮಾತನಾಡಿದ್ದಾರೆ. ಭೇಟಿಯ ಬಳಿಕ ಯಾವುದೇ ಪ್ರತಿಕ್ರಿಯೆ ನೀಡದೇ ಕಿರಣ್ ಮಜುಂದಾರ್ ಶಾ ತೆರಳಿದರು.
ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ ಡಿಕೆಶಿ, ಇಂದು ನನ್ನ ನಿವಾಸದಲ್ಲಿ ಉದ್ಯಮಿ ಮತ್ತು ಬಯೋಕಾನ್ ಸಂಸ್ಥಾಪಕಿ ಕಿರಣ್ ಮಜುಂದಾರ್ ಶಾ ಅವರನ್ನು ಭೇಟಿಯಾಗಿದ್ದು ಸಂತೋಷವಾಯಿತು. ಬೆಂಗಳೂರಿನ ಬೆಳವಣಿಗೆ, ನಾವೀನ್ಯತೆ ಮತ್ತು ಕರ್ನಾಟಕದ ಬೆಳವಣಿಗೆಯ ಕಥೆಯ ಮುಂದಿನ ಹಾದಿಯ ಕುರಿತು ನಾವು ಉತ್ತಮ ಚರ್ಚೆ ನಡೆಸಿದ್ದೇವೆ ಎಂದು ಹೇಳಿದ್ದಾರೆ.