ವಿಜಯಸಾಕ್ಷಿ ಸುದ್ದಿ, ಹುಬ್ಬಳ್ಳಿ: ತಾಲೂಕು ಆಡಳಿತಸೌಧದ ತಹಸೀಲ್ದಾರ ಕಾರ್ಯಾಲಯದ ಸಭಾಭವನದಲ್ಲಿ ಕಂದಾಯ ಇಲಾಖೆ ಹಾಗೂ ತಾಲೂಕು ಆಡಳಿತ ಹುಬ್ಬಳ್ಳಿ ನಗರ ಮತ್ತು ಗ್ರಾಮೀಣ ವತಿಯಿಂದ ವೀರರಾಣಿ ಕಿತ್ತೂರು ಚೆನ್ನಮ್ಮ ಜಯಂತಿ ಆಚರಿಸಲಾಯಿತು.
Advertisement
ಈ ಸಂದರ್ಭದಲ್ಲಿ ಸಮಾಜದ ಸಾಧಕರನ್ನು ಸನ್ಮಾನಿಸಿ ಗೌರವಿಸಲಾಯಿತು. ಡಾ .ಸುವರ್ಣಲತಾ ಗದಿಗೆಪ್ಪ ಗೌಡ್ರು ಉಪನ್ಯಾಸ ನೀಡಿದರು. ಈ ಸಂದರ್ಭದಲ್ಲಿ ಹುಬ್ಬಳ್ಳಿ ಗ್ರಾಮೀಣ ತಹಸೀಲ್ದಾರ ಜೆ.ಬಿ. ಮಜ್ಜಗಿ, ಸಮಾಜದ ಮುಖಂಡರಾದ ಅನಸೂಯಾ ಅರಕೇರಿ, ಸರ್ವಮಂಗಳ, ಸಂಜೀವ ಧುಮ್ಮಕನಾಳ, ಚನ್ನಬಸಪ್ಪ ಧಾರವಾಡಶೆಟ್ರ, ರತ್ನಾ ಎಸ್.ಚಾಶೆಟ್ಟಿ, ಸದಾಶಿವ ಎಸ್.ಚಾಶೆಟ್ಟಿ, ವೀರಣ್ಣ ಬ.ನೀರಲಗಿ, ರತ್ನ, ಸುರೇಶ ಬಾರಕೇರ, ಸಮಾಜದ ಮುಖಂಡರು, ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.