ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ ಅಂಗವಾಗಿ ಜಿಲ್ಲೆಗೆ ಬುಧವಾರ ಬೆಳಿಗ್ಗೆ ಆಗಮಿಸಿದ ಕಿತ್ತೂರು ರಾಣಿ ಚನ್ನಮ್ಮ ವಿಜಯ ಜ್ಯೋತಿ ಯಾತ್ರಾ ರಥವನ್ನು ಜಿಲ್ಲಾಧಿಕಾರಿ ದಿವ್ಯ ಪ್ರಭು ಡಿಸಿ ಕಚೇರಿ ಮುಂಭಾಗದಲ್ಲಿ ಸ್ವಾಗತಿಸಿ, ಪೂಜೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಮಾಜಿ ಶಾಸಕರು ಹಾಗೂ ಕವಿವ ಸಂಘದ ಅಧ್ಯಕ್ಷ ಚಂದ್ರಕಾಂತ ಬೆಲ್ಲದ, ತಹಸೀಲ್ದಾರ ಡಿ.ಎಚ್. ಹೂಗಾರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಕುಮಾರ ಬೆಕ್ಕೇರಿ, ಕನ್ನಡ ಪರ ಸಂಘಟನೆಗಳ ಮುಖಂಡರು, ಕಾರ್ಯಕರ್ತರು, ಸಾರ್ವಜನಿಕರು ಉಪಸ್ಥಿತರಿದ್ದರು.