ತುಮಕೂರು: ಕಾಂಗ್ರೆಸ್ ಹೈಕಮಾಂಡ್ ಸೂಚನೆಯಂತೆ ಸಚಿವ ಸಂಪುಟದಿಂದ ಕೆ.ಎನ್. ರಾಜಣ್ಣ ಅವರನ್ನು ವಜಾಗೊಳಿಸಲಾಗಿದೆ. ಈ ದಿಢೀರ್ ನಿರ್ಧಾರ ಕಾಂಗ್ರೆಸ್ ವಲಯದಲ್ಲಿ ಕೋಲಾಹಲಕ್ಕೆ ಕಾರಣವಾಗಿದ್ದು, ಮಧುಗಿರಿಯಲ್ಲಿ ರಾಜಣ್ಣ ಬೆಂಬಲಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
Advertisement
ಸರ್ಕಾರದ ಕ್ರಮವನ್ನು ಖಂಡಿಸಿದ ಬೆಂಬಲಿಗರು ಬೀದಿಗಿಳಿದು ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ ಯುವಕನೊಬ್ಬ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಮಧುಗಿರಿಯ ಕಾಂಗ್ರೆಸ್ ಮುಖಂಡರು ಇಂದು ಮಧ್ಯಾಹ್ನ 1 ಗಂಟೆಯಿಂದ ಸ್ವಯಂಪ್ರೇರಿತ ಬಂದ್ ಆಚರಿಸಲು ಕರೆ ನೀಡಿದ್ದಾರೆ. ಇದು ತುಮಕೂರು ಜಿಲ್ಲೆಗೆ ಆದ ದೊಡ್ಡ ಅನ್ಯಾಯ ಎಂದು ಅವರು ಆರೋಪಿಸಿದ್ದಾರೆ.