ಬೆಂಗಳೂರು: 101 ಜಾತಿಗಳ ಜನಸಂಖ್ಯೆ ತಿಳಿಯಲು ಒಳಮೀಸಲಾತಿ ಜಾರಿಗೆ ಗಣತಿ ಮಾಡುತ್ತಿದ್ದೇವೆ ಎಂದು ಸಮಾಜಕಲ್ಯಾಣ ಸಚಿವ ಹೆಚ್ ಸಿ ಮಹದೇವಪ್ಪ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಪರಿಶಿಷ್ಟ ಜಾತಿಗಳಲ್ಲಿನ 101 ಜಾತಿಗಳ ಜನಸಂಖ್ಯೆ ತಿಳಿಯಲು ಒಳಮೀಸಲಾತಿ ಜಾರಿಗೆ ಗಣತಿ ಮಾಡುತ್ತಿದ್ದೇವೆ.
ಗಣತಿ ಕಾರ್ಯಕ್ಕೆ ಅಂದಾಜು 100 ಕೋಟಿ ರೂ ಹಣ ಖರ್ಚು ಆಗಲಿದೆ ಎಂದು ತಿಳಿಸಿದ್ದಾರೆ.ಇದು ಎಸ್ಸಿ ಅವರಿಗೆ ಮಾತ್ರ ಈ ಸಮೀಕ್ಷೆ. ಇದು ಎಂಪರಿಕಲ್ ಡಾಟಾ ಕಲೆಕ್ಟ್ ಮಾಡುವುದು ಅಷ್ಟೇ. ಈ ಸಮೀಕ್ಷೆಗೆ ಎಡಗೈ ಮತ್ತು ಬಲಗೈನವರ ಒಮ್ಮತ ಇದೆ.
ಯಾರು ಕೂಡ ಸುಳ್ಳು ಹೇಳೋಕೆ ಆಗಲ್ಲ, ಕಾಂತರಾಜು ವರದಿಯಲ್ಲಿ, ನ್ಯಾಷನಲ್ ಸಮೀಕ್ಷೆಯಲ್ಲಿ ಅಂಕಿ-ಅಂಶ ಇಲ್ಲ. ಹೀಗಾಗಿ ಯಾರು ಕೂಡ ಅನುಮಾನ ಪಡುವ ಹಾಗಿಲ್ಲ. ಯಾರು, ಎಷ್ಟು ಜನ ಇದ್ದಾರೆ ಅಂತಾ ಯಾರಿಗೂ ಸಹ ಗೊತ್ತಿಲ್ಲ ಎಂದು ಹೇಳಿದ್ದಾರೆ.



