ಮಡಿಕೇರಿ;- ಮನೆಯ ಹಿಂಭಾಗದಲ್ಲಿ ಗಾಂಜಾ ಬೆಳೆದಿದ್ದ ಆರೋಪದಡಿ ವ್ಯಕ್ತಿಯೊಬ್ಬರನ್ನು ಕೊಡಗು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಕಾವೇರಪ್ಪ (48) ಎಂಬಾತನ ವಿರುದ್ಧ ಪ್ರಕರಣ ದಾಖಲಾಗಿದ್ದು, ಈತನ ಬಳಿಯಿಂದ 5 ಕೆ.ಜಿ. ಹಸಿ ಗಾಂಜಾವನ್ನು ವಶಕ್ಕೆ ಪಡೆಯಲಾಗಿದೆ.
Advertisement
ಗಾಂಜಾ ಗಿಡಗಳನ್ನು ಬೆಳಸಿರುವ ಕುರಿತು ಖಚಿತ ಮಾಹಿತಿ ದೊರೆತ ಹಿನ್ನೆಲೆಯಲ್ಲಿ ವಿರಾಜಪೇಟೆ ಉಪ ವಿಭಾಗದ ಡಿವೈಎಸ್‌ಪಿ ಆರ್. ಮೋಹನ್ ಕುಮಾರ್, ಗೋಣಿಕೊಪ್ಪ ವೃತ್ತದ ಗೋವಿಂದರಾಜು, ಪಿಎಸ್‌ಐ ರೂಪಾದೇವಿ ಬಿರಾದರ್ ಹಾಗೂ ಸಿಬಂದಿ ದಾಳಿ ನಡೆಸಿ ಮಾಲು ಸಹಿತ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದು ಬಂದಿದೆ.