ಕೋಲಾರ: ಮಾಲೂರು ಪೊಲೀಸರು ಲಕ್ಕೂರು ಗ್ರಾಮದ ಬಳಿ ಬೈಕ್ ವ್ಹೀಲಿಂಗ್ ಮಾಡುತ್ತಿದ್ದ ನಾಲ್ಕು ಯುವಕರನ್ನು ಬಂಧಿಸಿದ್ದಾರೆ.
ಬಂಧಿತರನ್ನು ಬೆಂಗಳೂರು ಮೂಲದ ಸೈಯದ್ ನಹೀಂ, ಮಹಮ್ಮದ್ ಇಂಜುಮಾನ್, ಇಕ್ಬಾಲ್ ಶೇಕ್ ವಿಕ್ರಂ ಮತ್ತು ಮಹಮ್ಮದ್ ತೋಹಿದ್ ಎಂದು ಗುರುತಿಸಲಾಗಿದೆ.
ಆರೋಪಿಗಳು ಅಕ್ರಮವಾಗಿ ಬೈಕ್ ವ್ಹೀಲಿಂಗ್ ಮಾಡುತ್ತಿದ್ದುದರಿಂದ ಪೊಲೀಸರು ತಕ್ಷಣ ಕ್ರಮ ಕೈಗೊಂಡಿದ್ದಾರೆ. ಈ ಸಂದರ್ಭ, ಆರೋಪಿಗಳ ಬೈಕ್ಗಳನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.
ಮಾಲೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಈ ಘಟನೆಗೆ ಸಂಬಂಧಿಸಿ ಹೆಚ್ಚಿನ ವಿಚಾರಣೆ ನಡೆಯುತ್ತಿದೆ.



