ಕೋಲಾರ:- ಗೃಹ ಬಳಕೆ ಸಿಲಿಂಡರ್ ಸ್ಫೋಟಗೊಂಡು ಮನೆಯಲ್ಲಿದ್ದ ದಂಪತಿಗಳಿಗೆ ತೀವ್ರ ಗಾಯವಾಗಿರುವ ಘಟನೆ ಕೋಲಾರ ತಾಲ್ಲೂಕಿನ ಕೋಡಿ ಕಣ್ಣೂರು ಗ್ರಾಮದಲ್ಲಿ ಜರುಗಿದೆ.
Advertisement
ಗಾಯಾಳುಗಳನ್ನು ಮುನಿರಾಜು ಹಾಗೂ ರತ್ನಮ್ಮ ಎಂದು ಗುರುತಿಸಲಾಗಿದೆ. ಸಿಲಿಂಡರ್ ಬದಲಿಸಿ ಸ್ಟೌ ಅಂಟಿಸಿದ ವೇಳೆ ಸಿಲಿಂಡರ್ ಬ್ಲಾಸ್ಟ್ ಆಗಿದೆ. ಈ ವೇಳೆ ಮನೆಯಲ್ಲಿದ್ದ ಗೃಹ ಬಳಕೆ ವಸ್ತುಗಳು ಪೀಸ್ ಪೀಸ್ ಆಗಿದೆ.
ಈ ವೇಳೆ ದಂಪತಿ ಇಬ್ಬರಿಗೂ ಗಂಭೀರ ಗಾಯವಾಗಿದ್ದು, ಮನೆಯಲ್ಲಿದ್ದ ಮಗಳು ನೇತ್ರಾಗೂ ಸಣ್ಣಪುಟ್ಟ ಗಾಯವಾಗಿದೆ. ಇವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮುನಿರಾಜು ಹಾಗೂ ರತ್ನಮ್ಮಗೆ ಶೇ ೪೦ ರಷ್ಟು ಸುಟ್ಟ ಗಾಯಗಳಾಗಿವೆ ಎಂದು ತಿಳಿದು ಬಂದಿದೆ.
ಕೂಡಲೇ ಕೋಲಾರ ಗ್ರಾಮಾಂತರ ಪೊಲೀಸರು ಹಾಗೂ ತಹಸೀಲ್ದಾರ್ ನಯನ ಎಂ ಸ್ಥಳಕ್ಕೆ ಭೇಟಿ ಕೊಟ್ಟು ಪರಿಶೀಲನೆ ಮಾಡಿದ್ದಾರೆ.