ಕೋಲಾರ: ಕುರಿ ಮೇಯಿಸುತ್ತಿದ್ದ ವ್ಯಕ್ತಿಯನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಕೋಲಾರ ತಾಲ್ಲೂಕು ಚನ್ನಸಂದ್ರ ಗ್ರಾಮದಲ್ಲಿ ನಡೆದಿದೆ. ನಾಗರಾಜ್ (೪೮) ಕೊಲೆಯಾದ ವ್ಯಕ್ತಿಯಾಗಿದ್ದು, ಸಾವನ್ನಪ್ಪಿದ ನಾಗರಾಜ್, ವ್ಯವಸಾಯ ಜೊತೆಗೆ ಪೈನಾನ್ಸ್ ವ್ಯವಹಾರ ಮಾಡುತ್ತಿದ್ದನು.
ಹಣಕ್ಕಾಗಿ ಕೊಲೆ ಮಾಡಿರುವ ಶಂಕೆಯಾಗಿದ್ದು, ಸ್ಥಳಕ್ಕೆ ಕೋಲಾರ ಎಸ್ಪಿ ನಿಖಿಲ್.ಬಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆರೋಪಿಗಳ ಬಂಧನಕ್ಕೆ ಬಲೆ ಬೀಸಿರುವ ಪೊಲೀಸರು, ವೇಮಗಲ್ ಪೊಲೀಸ್ ಠಾಣೆಯಲ್ಲಿ ಪ್ರಕಣ ದಾಖಲು ಮಾಡಿದ್ದಾರೆ.



