ಕೋಲಾರ: ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ನವವಿವಾಹಿತೆ ಆತ್ಮಹತ್ಯೆ ಡೆತ್ನೋಟ್ ಬರೆದಿಟ್ಟು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಮಾನಸ (24) ಮೃತ ದುರ್ದೈವಿ. ಕೋಲಾರ ಹೊರವಲಯದ ಸಹಕಾರನಗರದಲ್ಲಿ ನಡೆದಿರುವ ಘಟನೆ ನಡೆದಿದೆ. ಒಂದು ವರ್ಷದ ಹಿಂದೆ ಕೋಲಾರ ತಾಲೂಕಿನ ತೂರಾಂಡಹಳ್ಳಿ ಗ್ರಾಮದ ಉಲ್ಲಾಸ್ ಗೌಡ ಎಂಬುವರ ಜೊತೆ ಮಾನಸ ಮದುವೆಯಾಗಿತ್ತು.
ಪತಿ ಉಲ್ಲಾಸ್ ಹಾಗೂ ಕುಟುಂಬಸ್ಥರಿಂದ ವರದಕ್ಷಿಣೆ ಕಿರುಕುಳ ನೀಡುತ್ತಿದ್ದಾರೆ ಎಂದು ಮೃತ ಮಾನಸ ತವರುಮನೆಗೆ ಬಂದು ಪೋಷಕರ ಜೊತೆ ವಾಸವಾಗಿದ್ದಳು. ಆದರೆ, ಇದೀಗ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೋಲಾರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.



