HomeKarnataka Newsಕೋಲಾರ| ಕಾಮಸಮುದ್ರ ಪೊಲೀಸರ ಬಲೆಗೆ ಬಿದ್ದ ಇಬ್ಬರು ಖದೀಮರು!

ಕೋಲಾರ| ಕಾಮಸಮುದ್ರ ಪೊಲೀಸರ ಬಲೆಗೆ ಬಿದ್ದ ಇಬ್ಬರು ಖದೀಮರು!

For Dai;y Updates Join Our whatsapp Group

Spread the love

ಕೋಲಾರ:- ಕೋಲಾರದ ಕಾಮಸಮುದ್ರ ಪೊಲೀಸರು ಕಾರ್ಯಾಚರಣೆ ನಡೆಸಿ ದೇವಾಲಯ, ಮನೆ ಕಳವು ಪ್ರಕರಣಗಳಲ್ಲಿ ಭಾಗಿಯಾಗಿದ್ದ ಇಬ್ಬರು ಆರೋಪಿಗಳನ್ನು ಅರೆಸ್ಟ್ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.

ಕೆ.ಚಿನ್ನಸ್ವಾಮಿ (57), ಮಣಿ ಬಾಬು (55) ಬಂಧಿತ ಆರೋಪಿಗಳು. ಬಂಗಾರಪೇಟೆ ತಾಲೂಕಿನ ಕುಂದರಸನಹಳ್ಳಿ ಗ್ರಾಮದ ಕಾಳಿಕಾಂಭ ದೇವಸ್ಥಾನ, ದೋಣಿಮಡಗು ಗ್ರಾಮದ ಸತೀಶ್‌ರೆಡ್ಡಿ, ಸೀನಪ್ಪ ಕೊಂಗರಹಳ್ಳಿ ಗ್ರಾಮದ ವೆಂಕಟೇಶಪ್ಪ, ಮುನಿಯಮ್ಮ, ಶೇಖ್ ಲಿಯಾಕತ್ ಮತ್ತು ಗೌರಮ್ಮ ಮನೆಗಳಲ್ಲಿ ಕಳ್ಳತನವಾಗಿತ್ತು. ಈ ಸಂಬಂಧ ಕಾಮಸಮುದ್ರ ಪೊಲೀಸ್ ಠಾಣೆಯಲ್ಲಿ ಪ್ರಕರಣಗಳು ದಾಖಲಾಗಿತ್ತು. ಈ ಹಿನ್ನೆಲೆ ಪೊಲೀಸರು ಕಾರ್ಯಾಚರಣೆ ನಡೆಸಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

ಬಂಧಿತರಿಂದ 3.78 ಲಕ್ಷ ರೂ. ಮೌಲ್ಯದ 34 ಗ್ರಾಂ ಚಿನ್ನಾಭರಣ, 380 ಗ್ರಾಂ ಬೆಳ್ಳಿ ಆಭರಣಗಳನ್ನು ಮತ್ತು ಕೃತ್ಯಕ್ಕೆ ಉಪಯೋಗಿಸಿದ ಒಂದು ದ್ವಿಚಕ್ರವಾಹನವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸದ್ಯ ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!