ಕೋಲಾರ:- ಜಿಲ್ಲೆ ಶ್ರೀನಿವಾಸಪುರ ಪಟ್ಟಣದ ನಂಬಿಹಳ್ಳಿ ಸರ್ಕಲ್ ನಲ್ಲಿ ಕಳೆದ ರಾತ್ರಿ ಸುರಿದ ಮಳೆಗೆ ಬೃಹತ್ ಗಾತ್ರದ ಮರ ಉರುಳಿ ಬಿದ್ದ ಘಟನೆ ಜರುಗಿದೆ.
Advertisement
ಘಟನೆಯಲ್ಲಿ ಮರದಡಿ ನಿಂತಿದ್ದ ಒಂದು ಆಟೋ ಜಖಂ ಆಗಿದ್ದು, ನಾಲ್ಕು ವಿದ್ಯುತ್ ಕಂಬಗಳು ಮುರಿದು ಬಿದ್ದಿವೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಅರಣ್ಯ ಇಲಾಖೆ ಸಿಬ್ಬಂದಿ ಹಾಗೂ ಪುರಸಭೆ ಸಿಬ್ಬಂದಿಯಿಂದ ಮರ ತೆರವು ಗೊಳಿಸುವ ಕಾರ್ಯ ನಡೆದಿದೆ.
ಶ್ರೀನಿವಾಸಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ.