ಕೋಲ್ಕತ್ತಾ: ಇಡಿ ದೇಶವನ್ನೇ ಬೆಚ್ಚಿ ಬೀಳಿಸಿದ್ದ ಕೋಲ್ಕತ್ತಾ ಆರ್ ಜಿ ಕರ್ ಮೆಡಿಕಲ್ ಕಾಲೇಜು ಟ್ರೈನಿ ವೈದ್ಯೆಯ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಸಂಜಯ್ ರಾಯ್ ಗೆ ಕೋರ್ಟ್ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ಪ್ರಕಟಿಸಿದೆ. ಶಿಕ್ಷೆಯ ಘೋಷಣೆಗೂ ಮುನ್ನ ಅಪರಾಧಿ ಸಂಜಯ್ ರಾಯ್ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದಾಗ ನ್ಯಾಯಾಧೀಶರು ಅವರು ತಪ್ಪಿತಸ್ಥ ಎಂದು ಘೋಷಿಸಿದ್ದರು.
ಶಿಕ್ಷೆಯ ಬಗ್ಗೆ ಏನಾದರೂ ಹೇಳಲು ಇದೆಯೇ ಎಂದು ನ್ಯಾಯಾಲಯ ಕೇಳಿದಾಗ ತಾನು ತಪ್ಪಿತಸ್ಥನಲ್ಲ, ನಾನು ಯಾವ ತಪ್ಪು ಮಾಡಿಲ್ಲ, ನಾನು ಅಂದು ರುದ್ರಾಕ್ಷಿ ಮಾಲೆಯನ್ನು ಹಾಕಿದ್ದೆ, ಕೆಲವರು ತಪ್ಪೊಪ್ಪಿಕೊಳ್ಳುವಂತೆ ಒತ್ತಡ ಹೇರುತ್ತಿದ್ದಾರೆ ಎಂದು ಹೇಳಿದ್ದಾನೆ.
ಸಂಜಯ್ ಎಸಗಿರುವ ಕೃತ್ಯ ಸಮಾಜಕ್ಕೆ ಆತಂಕಕಾರಿಯಾಗಿದೆ, ಹಾಗಾಗಿ ಅಪರಾಧಿಗೆ ಗಲ್ಲು ಶಿಕ್ಷೆ ವಿಧಿಸುವುದೇ ಸೂಕ್ತವೆಂದು ಸಿಬಿಐ ಮನವಿ ಮಾಡಿದೆ. ಗಲ್ಲು ಶಿಕ್ಷೆ ವಿಧಿಸುವುದರಿಂದ ವೈದ್ಯೆ ಸಾವಿಗೆ ನ್ಯಾಯ ಸಿಗುತ್ತದೆ ಎಂದು ನ್ಯಾಯಾಧೀಶ ಅನಿರ್ಬನ್ ದಾಸ್ ಅವರಿಗೆ ಸಿಬಿಐ ಪರ ವಕೀಕರು ಮನವಿ ಮಾಡಿದ್ದಾರೆ.