ಕೊಪ್ಪಳವು ಚಾರಿತ್ರಿಕ ಹಿನ್ನೆಲೆ ಹೊಂದಿದೆ

0
koppala
Spread the love

ವಿಜಯಸಾಕ್ಷಿ ಸುದ್ದಿ, ಕೊಪ್ಪಳ : ಕೊಪ್ಪಳ ಕನ್ನಡ ನಾಡಿಗೆ ವಿಶೇಷ ನೆರವಾಗಿದೆ. ಇಲ್ಲಿನ ಸಾಮ್ರಾಟ್ ಅಶೋಕನ ಮೂಲಕ ರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಂಡಿದೆ. ಕೊಪ್ಪಳವು ಚಾರಿತ್ರಿಕ ಹಿನ್ನೆಲೆಯನ್ನೂ ಹೊಂದಿದೆ ಎಂದು ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಕೆ.ಎಮ್. ಮೇತ್ರಿ ಅಭಿಪ್ರಾಯಪಟ್ಟರು.

Advertisement

ಕೊಪ್ಪಳ ವಿಶ್ವವಿದ್ಯಾಲಯದಲ್ಲಿ ನಡೆದ ಪ್ರಥಮ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮಕ್ಕೆ ಜ್ಯೋತಿ ಬೆಳಗಿಸುವ ಮೂಲಕ ಚಾಲನೆ ನೀಡಿ ಮಾತನಾಡಿದರು.

ಗದುಗಿನ ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ವಿಷ್ಣುಕಾಂತ್ ಎಸ್.ಚಟಪಲ್ಲಿ ಮಾತನಾಡಿ, ಕೊಪ್ಪಳ ವಿಶ್ವವಿದ್ಯಾಲಯದಿಂದ ಗ್ರಾಮೀಣ ಪ್ರದೇಶದ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಸಿಗುವಂತಾಗಲಿ ಎಂದರು.

ಗೊಟಗೋಡಿ, ಶಿಗ್ಗಾಂವಿಯ ಕರ್ನಾಟಕ ಜಾನಪದ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಟಿ.ಎಂ. ಭಾಸ್ಕರ್ ಮಾತನಾಡಿ, ಸಂವಿಧಾನ ಆಶಯವನ್ನು ಜಾರಿಗೆ ತರುವ ಕೆಲಸವಾಗಬೇಕು. ಸಂವಿಧಾನ ಆಶಯದಂತೆ ನಾವೆಲ್ಲರೂ ನಡೆಯೋಣ ಎಂದರು. ಹಾವೇರಿ ವಿಶ್ವ ವಿದ್ಯಾಲಯದ ಕುಲಪತಿ ಪ್ರೊ. ಸುರೇಶ ಎಚ್.ಜಂಗಮಶೆಟ್ಟಿ, ಬೀದರ ವಿವಿ ಕುಲಪತಿ ಪ್ರೊ. ಬಿ.ಎಸ್. ಬಿರಾದಾರ, ಕೊಡಗು ವಿವಿ ಕುಲಪತಿ ಪ್ರೊ. ಅಶೋಕ ಸಂಗಪ್ಪ ಆಲೂರು, ಹಾಸನ ವಿವಿ ಕುಲಪತಿ ಪ್ರೊ. ತರೀಕೆರಿ ಸಿ.ತಾರಾನಾಥ, ಚಾಮರಾಜನಗರ ವಿವಿ ಕುಲಪತಿ ಪ್ರೊ. ಎಮ್.ಆರ್. ಗಂಗಾಧರ್, ವಿಜಯನಗರ ಶ್ರೀಕೃಷ್ಣದೇವರಾಯ ವಿವಿ ಕುಲಸಚಿವ ಎಸ್.ಎನ್. ರುದ್ರೇಶ ಮಾತನಾಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೊಪ್ಪಳ ವಿವಿ ಕುಲಪತಿ ಪ್ರೊ. ಬಿ.ಕೆ. ರವಿ ಬಹಿಸಿ ಮಾತನಾಡಿದರು. ಕುಲ ಸಚಿವ ಡಾ. ಕೆ.ವಿ. ಪ್ರಸಾದ್, ಸ್ನಾತಕೋತ್ತರ ಕೇಂದ್ರದ ನಿರ್ದೇಶಕರಾದ ಡಾ. ಸಿ.ಐ. ಚಲವಾದಿ, ಡಾ.ಪ್ರಕಾಶ ಯಳವಟ್ಟಿ, ಡಾ. ಬಾಜಿ ದೇವೇಂದ್ರಪ್ಪ, ವಿವಿ ವ್ಯಾಪ್ತಿಯ ಕಾಲೇಜಿನ ಪ್ರಾಚಾರ್ಯರು, ಪ್ರಾಧ್ಯಾಪಕರು, ಭೋಧಕ, ಬೋಧಕೇತರ ಸಿಬ್ಬಂದಿಗಳು, ವಿದ್ಯಾರ್ಥಿಗಳು, ಸಂಶೋಧನಾ ವಿದ್ಯಾರ್ಥಿಗಳು ಇದ್ದರು.

ವರ್ಷಿಣಿ ಸಂಗಡಿಗರು ನಾಡಗೀತೆ ಹಾಗೂ ಪ್ರಾರ್ಥನೆ ಹಾಡಿದರು. ಕನ್ನಡ ವಿಭಾಗದ ಉಪನ್ಯಾಸಕ ವೀರೇಶ ಉತ್ತಂಗಿ ಮತ್ತು ಇತಿಹಾಸ ವಿಭಾಗದ ಉಪನ್ಯಾಸಕಿ ಗೀತಾ ಪಾಟೀಲ್ ನಿರೂಪಣೆ ಮಾಡಿದರು.


Spread the love

LEAVE A REPLY

Please enter your comment!
Please enter your name here