ಕೊಪ್ಪಳ:– ಹೃದಯಾಘಾತದಿಂದ 26 ವರ್ಷದ ಯುವತಿ ಸಾವನ್ನಪ್ಪಿರುವ ಘಟನೆ ಕೊಪ್ಪಳದಲ್ಲಿ ಜರುಗಿದೆ.
Advertisement
26 ವರ್ಷದ ಮಂಜುಳಾ ಹೂಗಾರ್ ಮೃತ ಯುವತಿ. ಇವರು ಕೊಪ್ಪಳದ ಶಿವಗಂಗಾ ಲೇಔಟ್ ನಿವಾಸಿ ಎನ್ನಲಾಗಿದೆ. ಮಧ್ಯಾಹ್ನ ಮಂಜುಳಾಗೆ ಲೋ ಬಿಪಿಯಾಗಿತ್ತು. ಕೂಡಲೇ ಆಕೆಯನ್ನು ಸ್ಥಳೀಯ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಮಾರ್ಗ ಮಧ್ಯೆ ಸಾವನ್ನಪ್ಪಿದ್ದಳು. ಆಸ್ಪತ್ರೆಯಲ್ಲಿ ವೈದ್ಯರು ಪರಿಶೀಲಿಸಿ ಹೃದಯಾಘಾತದಿಂದ ಮೃತಪಟ್ಟಿರುವುದಾಗಿ ಖಚಿತಪಡಿಸಿದ್ದಾರೆ.
ಯುವತಿ ಸಾವಿನಿಂದ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.