HomeEntertainment‘ಕೊರಗಜ್ಜ’ ನಿರ್ದೇಶಕನಿಗೆ ನಿರ್ಮಾಪಕರಿಂದ ಕೋಟಿ ಮೌಲ್ಯದ ಸರ್ಪ್ರೈಸ್ ಗಿಫ್ಟ್‌

‘ಕೊರಗಜ್ಜ’ ನಿರ್ದೇಶಕನಿಗೆ ನಿರ್ಮಾಪಕರಿಂದ ಕೋಟಿ ಮೌಲ್ಯದ ಸರ್ಪ್ರೈಸ್ ಗಿಫ್ಟ್‌

For Dai;y Updates Join Our whatsapp Group

Spread the love

ಮಂಗಳೂರು: ಇನ್ನೂ ಸಿನಿಮಾ ಬಿಡುಗಡೆಯಾಗಿಲ್ಲ. ಆದರೆ ‘ಕೊರಗಜ್ಜ’ ಚಿತ್ರ ಈಗಾಗಲೇ ದಾಖಲೆ ಮಟ್ಟದ ಚರ್ಚೆಗೆ ಕಾರಣವಾಗಿದೆ. ಚಿತ್ರದ ಮೇಲೆ ನಿರ್ಮಾಪಕರ ವಿಶ್ವಾಸ ಎಷ್ಟರ ಮಟ್ಟಿಗೆ ಇದೆ ಎಂಬುದಕ್ಕೆ ನಿರ್ದೇಶಕ ಸುಧೀರ್ ಅತ್ತಾವರ್ ಅವರಿಗೆ ನೀಡಲಾದ ₹1.75 ಕೋಟಿ ಮೌಲ್ಯದ ಐಷಾರಾಮಿ ಫ್ಲಾಟ್ ಸಾಕ್ಷಿಯಾಗಿದೆ.

ಮೂರು ವರ್ಷಗಳಿಂದ ನಿರಂತರವಾಗಿ ಸಿನಿಮಾ ನಿರ್ಮಾಣದ ಕೆಲಸದಲ್ಲಿ ತೊಡಗಿದ್ದ ನಿರ್ದೇಶಕರ ಶ್ರಮವನ್ನು ಗುರುತಿಸಿ ನಿರ್ಮಾಪಕ ತ್ರಿವಿಕ್ರಮ ಸಪಲ್ಯ ಈ ದುಬಾರಿ ಉಡುಗೊರೆಯನ್ನು ನೀಡಿದ್ದಾರೆ. ಇತ್ತೀಚೆಗೆ ನಡೆದ ಗೃಹ ಪ್ರವೇಶ ಕಾರ್ಯಕ್ರಮದಲ್ಲಿ ಚಿತ್ರತಂಡದ ಪ್ರಮುಖರು ಭಾಗವಹಿಸಿದ್ದರು.

ಇದೇ ವೇಳೆ ‘ಕೊರಗಜ್ಜ’ ಚಿತ್ರ ಮತ್ತೊಂದು ಮಹತ್ವದ ಹೆಜ್ಜೆ ಇಟ್ಟಿದೆ. ಈಗಾಗಲೇ ಆರು ಭಾಷೆಗಳಲ್ಲಿ ನಿರ್ಮಾಣವಾಗುತ್ತಿರುವ ಈ ಸಿನಿಮಾ ಚೈನೀಸ್ ಹಾಗೂ ಇಂಗ್ಲಿಷ್ ಆವೃತ್ತಿಗಳಲ್ಲೂ ಬಿಡುಗಡೆಯಾಗಲು ಸಜ್ಜಾಗಿದೆ. ಹಾಂಕಾಂಗ್ ಮತ್ತು ಬೀಜಿಂಗ್ ಮೂಲದ ವಿತರಣಾ ಸಂಸ್ಥೆಗಳು ಚಿತ್ರದ ಹಕ್ಕುಗಳ ಕುರಿತು ಮಾತುಕತೆ ನಡೆಸುತ್ತಿರುವುದು ಚಿತ್ರದ ವ್ಯಾಪ್ತಿಯನ್ನು ಮತ್ತಷ್ಟು ವಿಸ್ತರಿಸಿದೆ.

ಚಿತ್ರದ 3ಡಿ ತಾಂತ್ರಿಕ ಕಾರ್ಯಗಳು ಕೊಚ್ಚಿ ಮತ್ತು ಚೆನ್ನೈನಲ್ಲಿ ನಡೆಯುತ್ತಿದ್ದು, ಅಂತರರಾಷ್ಟ್ರೀಯ ಗುಣಮಟ್ಟದ ದೃಶ್ಯಾನುಭವ ನೀಡುವ ಗುರಿ ಹೊಂದಲಾಗಿದೆ. ಸುಮಾರು ₹40 ಕೋಟಿಗೂ ಅಧಿಕ ಬಜೆಟ್‌ನಲ್ಲಿ ನಿರ್ಮಾಣವಾಗುತ್ತಿರುವ ಈ ಸಿನಿಮಾ ಕರಾವಳಿ ದೈವ ಆರಾಧನೆಯ ಕಥೆಯನ್ನು ಜಾಗತಿಕ ಮಟ್ಟಕ್ಕೆ ಕೊಂಡೊಯ್ಯುವ ನಿರೀಕ್ಷೆ ಮೂಡಿಸಿದೆ.

ಹಿರಿಯ ನಟಿ ಭವ್ಯ ಅಭಿನಯಿಸಿರುವ ಈ ಚಿತ್ರದಲ್ಲಿ ದೈವ ಪರಂಪರೆ, ಸಂಸ್ಕೃತಿ ಹಾಗೂ ಆಧ್ಯಾತ್ಮಿಕ ಅಂಶಗಳಿಗೆ ವಿಶೇಷ ಒತ್ತು ನೀಡಲಾಗಿದ್ದು, ಆಗಸ್ಟ್‌ನಲ್ಲಿ ಚಿತ್ರಮಂದಿರಗಳಲ್ಲಿ ಅದ್ದೂರಿ ಬಿಡುಗಡೆಗೆ ಸಿದ್ಧತೆ ನಡೆಯುತ್ತಿದೆ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!