ಬೆಂಗಳೂರು:– ಮಾರ್ಚ್ 28, 29 ಮತ್ತು ಏಪ್ರಿಲ್ 1, 2ರಂದು ನಿಗದಿಯಾಗಿದ್ದ ಕರ್ನಾಟಕ ಲೋಕಸೇವಾ ಆಯೋಗದ ಪರೀಕ್ಷೆ ಮುಂದೂಡಿಕೆ ಮಾಡಲಾಗಿದೆ.
Advertisement
ಕರ್ನಾಟಕ ಲೋಕಸೇವಾ ಆಯೋಗವು 2023-24ನೇ ಸಾಲಿನ ಗೆಜೆಟೆಡ್ ಪ್ರೊಬೇಷನರ್ ಗ್ರೂಪ್ ಎ ಮತ್ತು ಗ್ರೂಪ್ ಬಿ ವೃಂದದ 384 ಹುದ್ದೆಗಳಿಗೆ ಮುಖ್ಯ ಪರೀಕ್ಷೆಯ ಫೆಬ್ರವರಿ 13ರ ಅಧಿಸೂಚನೆ ಪ್ರಕಾರ ಮಾರ್ಚ್ 28, 29 ಮತ್ತು ಏಪ್ರಿಲ್ 1, 2ರಂದು ನಡೆಸಲು ದಿನಾಂಕವನ್ನು ನಿಗದಿಪಡಿಸಲಾಗಿತ್ತು. ಆದರೆ ಕಾರಣಾಂತರಗಳಿಂದ ಸದರಿ ಪರೀಕ್ಷೆಯ ದಿನಾಂಕವನ್ನು ಮುಂದೂಡಲಾಗಿದೆ. ಶೀಘ್ರದಲ್ಲಿ ಕರ್ನಾಟಕ ಲೋಕಸೇವಾ ಆಯೋಗದ ಅಧಿಕೃತ ವೆಚ್ ಸೈಟ್ನಲ್ಲಿ ಹೊಸ ದಿನಾಂಕವನ್ನು ಪ್ರಕಟಿಸುವುದಾಗಿ ಪ್ರಕಟಣೆಯಲ್ಲಿ ಉಲ್ಲೇಖಿಸಿದೆ.