ಬೆಂಗಳೂರು: ಕೆಪಿಎಸ್‌ಸಿ ಪಶುವೈದ್ಯಾಧಿಕಾರಿಗಳ ನೇಮಕಾತಿ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಪತ್ತೆಯಾಗಿದ್ದ ಐಎಎಸ್ ಅಧಿಕಾರಿ ಗ್ಯಾನೇಂದ್ರ ಕುಮಾರ್ ಇಂದು ಸಿಐಡಿ ಕಚೇರಿಗೆ ವಿಚಾರಣೆಗೆ ಹಾಜರಾಗಿದ್ದಾರೆ.
ಗ್ಯಾನೇಂದ್ರ ಕುಮಾರ್ ನಿನ್ನೆಯೇ ವಿಚಾರಣೆಗೆ ಹಾಜರಾಗಬೇಕಿತ್ತು. ಆದರೆ ನಿನ್ನೆ ವಿಚಾರಣೆಗೆ ಗೈರಾಗಿದ್ದ ಅವರು, ಇಂದು ಬೆಳಗ್ಗೆ 11 ಗಂಟೆ ಸುಮಾರಿಗೆ ಸಿಐಡಿ ಕಚೇರಿಗೆ ಆಗಮಿಸಿದ್ದಾರೆ.
ಈ ಹಿಂದೆ ಕರ್ನಾಟಕ ಲೋಕಸೇವಾ ಆಯೋಗದಲ್ಲಿ ಪರೀಕ್ಷಾ ನಿಯಂತ್ರಕರಾಗಿದ್ದ ಗ್ಯಾನೇಂದ್ರ ಕುಮಾರ್ ಅವಧಿಯಲ್ಲಿ ಪಶುವೈದ್ಯಾಧಿಕಾರಿಗಳ ನೇಮಕಾತಿ ನಡೆದಿತ್ತು. ಈ ನೇಮಕಾತಿಯಲ್ಲಿ ಅಕ್ರಮ ನಡೆದಿರುವ ಆರೋಪವಿದ್ದು, ಈ ಸಂಬಂಧ ಸಿಐಡಿ ತನಿಖಾ ತಂಡ ಗ್ಯಾನೇಂದ್ರ ಕುಮಾರ್ ಅವರನ್ನು ವಿಚಾರಣೆ ನಡೆಸಲಿದೆ.



