HomeBengaluru NewsKPSC ಪಶುವೈದ್ಯಾಧಿಕಾರಿ ನೇಮಕಾತಿ ಅಕ್ರಮ; ಗ್ಯಾನೇಂದ್ರ ಜಾಮೀನು ಅರ್ಜಿಗೆ ಇಂದು ಆಕ್ಷೇಪಣೆ!

KPSC ಪಶುವೈದ್ಯಾಧಿಕಾರಿ ನೇಮಕಾತಿ ಅಕ್ರಮ; ಗ್ಯಾನೇಂದ್ರ ಜಾಮೀನು ಅರ್ಜಿಗೆ ಇಂದು ಆಕ್ಷೇಪಣೆ!

For Dai;y Updates Join Our whatsapp Group

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದ (KPSC) ಪಶುವೈದ್ಯಾಧಿಕಾರಿಗಳ ನೇಮಕಾತಿಯಲ್ಲಿ ಅಕ್ರಮ ನಡೆದಿದೆ ಎನ್ನಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಗ್ಯಾನೇಂದ್ರ ಸಲ್ಲಿಸಿರುವ ಜಾಮೀನು ಅರ್ಜಿಗೆ ಇಂದು ಪ್ರಾಸಿಕ್ಯೂಷನ್‌ ಆಕ್ಷೇಪಣೆ ಸಲ್ಲಿಸಲಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಗ್ಯಾನೇಂದ್ರ ಅವರು ಜಾಮೀನು ಕೋರಿ ಬೆಂಗಳೂರಿನ 52ನೇ ಸಿಸಿಹೆಚ್‌ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯವು ಜಾಮೀನು ಅರ್ಜಿಗೆ ಸಂಬಂಧಿಸಿದಂತೆ ಸರ್ಕಾರದ ಪರ ವಾದ ಮಂಡಿಸುವ ಪ್ರಾಸಿಕ್ಯೂಷನ್‌ಗೆ ಆಕ್ಷೇಪಣೆ ಸಲ್ಲಿಸುವಂತೆ ಸೂಚಿಸಿತ್ತು.

ನ್ಯಾಯಾಲಯದ ಸೂಚನೆಯಂತೆ ಆಕ್ಷೇಪಣೆ ಸಲ್ಲಿಸಬೇಕಿದ್ದ ಪ್ರಾಸಿಕ್ಯೂಷನ್ ಈ ಹಿಂದೆ ಹೆಚ್ಚಿನ ಕಾಲಾವಕಾಶ ನೀಡುವಂತೆ ಮನವಿ ಮಾಡಿತ್ತು. ಇದರಿಂದ ಜಾಮೀನು ಅರ್ಜಿಯ ವಿಚಾರಣೆಯನ್ನು ಮುಂದೂಡಲಾಗಿತ್ತು.

ಇದೀಗ ಇಂದು 52ನೇ ಸಿಸಿಹೆಚ್‌ ನ್ಯಾಯಾಲಯಕ್ಕೆ ಪ್ರಾಸಿಕ್ಯೂಷನ್‌ ಪರವಾಗಿ ಗ್ಯಾನೇಂದ್ರ ಅವರ ಜಾಮೀನು ಅರ್ಜಿಗೆ ಆಕ್ಷೇಪಣೆ ಸಲ್ಲಿಸುವ ಸಾಧ್ಯತೆ ಇದೆ. ಆಕ್ಷೇಪಣೆಯಲ್ಲಿ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಯ ವಿವರಗಳು ಹಾಗೂ ಜಾಮೀನು ನೀಡಬಾರದು ಎಂಬುದಕ್ಕೆ ಸಂಬಂಧಿಸಿದ ಅಂಶಗಳನ್ನು ಪ್ರಾಸಿಕ್ಯೂಷನ್‌ ನ್ಯಾಯಾಲಯದ ಗಮನಕ್ಕೆ ತರಲಿದೆ.

ಪ್ರಾಸಿಕ್ಯೂಷನ್‌ನ ಆಕ್ಷೇಪಣೆ ಸಲ್ಲಿಕೆಯ ಬಳಿಕ ಗ್ಯಾನೇಂದ್ರ ಪರ ವಕೀಲರು ತಮ್ಮ ವಾದ ಮಂಡಿಸಲಿದ್ದು, ನಂತರ ನ್ಯಾಯಾಲಯ ಜಾಮೀನು ಅರ್ಜಿಯ ಕುರಿತು ಮುಂದಿನ ವಿಚಾರಣೆ ನಡೆಸಲಿದೆ.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img