ಮುಖ್ಯಮಂತ್ರಿ ಕುರ್ಚಿಗೆ ಕೃಷ್ಣ ಭೈರೇಗೌಡರು ಸೈಲೆಂಟಾಗೇ ಟವಲ್ ಹಾಕಿದ್ದಾರೆ: ಆರ್ ಅಶೋಕ್

0
Spread the love

ಬೆಂಗಳೂರು:- ಅತಿ ಬುದ್ಧಿವಂತಿಕೆ ಪ್ರದರ್ಶಿಸಿ ಸಿಎಂ ಕುರ್ಚಿಗೆ ಕೃಷ್ಣ ಭೈರೇಗೌಡ ಟವಲ್ ಹಾಕುತ್ತಿದ್ದಾರೆ ಎಂದು ಮಾಜಿ ಸಚಿವ ಆರ್ ಅಶೋಕ್ ವ್ಯಂಗ್ಯವಾಡಿದ್ದಾರೆ.

Advertisement

ಈ ಸಂಬಂಧ ಮಾತನಾಡಿದ ಅವರು,ಅತಿ ಬುದ್ಧಿವಂತಿಕೆ ಪ್ರದರ್ಶನ ಮಾಡುವ ಮೂಲಕ ಹೈಕಮಾಂಡ್ ಗಮನ ಸೆಳೆದು ಮುಖ್ಯಮಂತ್ರಿ ಕುರ್ಚಿಗೆ ನನ್ನದೂ ಒಂದು ಇರಲಿ ಅಂತ ಕಂದಾಯ ಸಚಿವ ಕೃಷ್ಣ ಬೈರೇಗೌಡ ಟವಲ್ ಹಾಕುತ್ತಿದ್ದಾರೆ. ರೈತರ ಬಗ್ಗೆ ಕೀಳರಿಮೆ ಇರುವ ಕೃಷ್ಣ ಭೈರೇಗೌಡರು ಐದು ವರ್ಷಗಳ ಕಾಲ ಕೃಷಿ ಸಚಿವರಾಗಿದ್ದು ಈ ರಾಜ್ಯದ ದೌರ್ಭಾಗ್ಯ ಎಂದರು.

ನನ್ನನ್ನು ನಿಂದಿಸುವ ಭರದಲ್ಲಿ ಕಡಲೆಕಾಯಿ ಬೆಳೆಯುವ ಸಾಮಾನ್ಯ ರೈತನಿಗೆ ಇರುವಷ್ಟು ‘ಕನಿಷ್ಠ ಜ್ಞಾನ’ ಎಂದು ರೈತರನ್ನು ಕೃಷ್ಣ ಭೈರೇಗೌಡರು ಹೀಯಾಳಿಸಿದ್ದಾರೆ. ಎಲ್ಲರಿಗೂ ಅವರಂತೆ ವಿದೇಶಕ್ಕೆ ಹೋಗಿ ವಿದ್ಯಾಭ್ಯಾಸ ಮಾಡಿಕೊಂಡು ಬರುವಷ್ಟು ಅನುಕೂಲ ಇರುವುದಿಲ್ಲ. ರಾಜಕಾರಣದಲ್ಲಿ ಕುಟುಂಬದ ಹಿನ್ನೆಲೆ ಇಲ್ಲದಂತಹ ನಮ್ಮಂತಹ ಸಾಮಾನ್ಯರೂ ಇದ್ದೀವಿ. ರೈತರ ಬಗ್ಗೆ ಇಂತಹ ಕೀಳರಿಮೆ ಇರುವ ತಮ್ಮಂತಹವರು ಐದು ವರ್ಷಗಳ ಕಾಲ ರಾಜ್ಯದ ಕೃಷಿ ಸಚಿವರಾಗಿದ್ದೀರಲ್ಲ, ಅದೇ ನಮ್ಮ ರಾಜ್ಯದ ದೌರ್ಭಾಗ್ಯ ಎಂದು ಅಶೋಕ್ ಹೇಳಿದ್ದಾರೆ.

ಜಿಎಸ್‌ಟಿ ಸಭೆಯಲ್ಲಿ ತೆರಿಗೆ ಹಂಚಿಕೆ ಬಗ್ಗೆ ಅಧಿಕೃತವಾಗಿ ಚರ್ಚೆ ನಡೆಯುವುದಿಲ್ಲ ಎಂಬ ಅರಿವು ನನಗೂ ಇದೆ. ಆದರೆ ಜಿಎಸ್‌ಟಿ ಸಭೆಯಲ್ಲಿ ಕೇಂದ್ರ ಹಣಕಾಸು ಸಚಿವರು, ರಾಜ್ಯಗಳ ಹಣಕಾಸು ಸಚಿವರು ಅಥವಾ ಇನ್ಯಾರಾದರೂ ಪ್ರತಿನಿಧಿ ಸಚಿವರು ಬಂದಿರುತ್ತಾರೆ ಅಲ್ಲವೇ? ಇಂತಹ ವೇದಿಕೆಯಲ್ಲಿ ಅನೌಪಚಾರಿಕವಾಗಿ ತೆರಿಗೆ ಹಂಚಿಕೆ ಬಗ್ಗೆ ಚರ್ಚಿಸಿ ಒಂದು ಒಮ್ಮತ ಸೃಷ್ಟಿಸುವ ಪ್ರಯತ್ನ ಮಾಡಬಹುದಿತ್ತಲ್ಲವೇ? ನನ್ನ ಮಾತಿನ ಅರ್ಥ ಇದಾಗಿತ್ತು ಎಂದು ಅವರು ತಿಳಿಸಿದ್ದಾರೆ.


Spread the love

LEAVE A REPLY

Please enter your comment!
Please enter your name here