HomeGadag Newsತಾಲೂಕು ಆಡಳಿತದಿಂದ ಕೃಷ್ಣ ಜನ್ಮಾಷ್ಟಮಿ ಆಚರಣೆ

ತಾಲೂಕು ಆಡಳಿತದಿಂದ ಕೃಷ್ಣ ಜನ್ಮಾಷ್ಟಮಿ ಆಚರಣೆ

For Dai;y Updates Join Our whatsapp Group

ವಿಜಯಸಾಕ್ಷಿ ಸುದ್ದಿ, ಶಿರಹಟ್ಟಿ: ತಾಲೂಕು ಆಡಳಿತದ ವತಿಯಿಂದ ಶುಕ್ರವಾರ ತಹಸೀಲ್ದಾರ್ ಕಚೇರಿಯಲ್ಲಿ ಕೃಷ್ಣ ಜನ್ಮಾಷ್ಟಮಿಯನ್ನು ಭಕ್ತಿಭಾವದಿಂದ ಆಚರಿಸಲಾಯಿತು.

ತಹಸೀಲ್ದಾರ್ ಕೆ. ರಾಘವೇಂದ್ರ ರಾವ್ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಶ್ರೀಕೃಷ್ಣನ ಭಾವಚಿತ್ರಕ್ಕೆ ಪೂಜೆ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ತಹಸೀಲ್ದಾರ್ ಕೆ. ರಾಘವೇಂದ್ರ ರಾವ್, ಕೃಷ್ಣ ಜನ್ಮಾಷ್ಟಮಿಯು ದೇಶಾದ್ಯಂತ ಆಚರಿಸಲಾಗುವ ಪ್ರಮುಖ ಹಬ್ಬಗಳಲ್ಲಿ ಒಂದಾಗಿದೆ. ಶ್ರೀಕೃಷ್ಣ ಹುಟ್ಟಿದ ದಿನವನ್ನು ಕೃಷ್ಣ ಜನ್ಮಾಷ್ಟಮಿ ಅಥವಾ ಗೋಕುಲಾಷ್ಟಮಿ ಎಂದು ವೈಭವದಿಂದ ಆಚರಿಸಲಾಗುತ್ತದೆ ಎಂದು ಹೇಳಿದರು.

ಗ್ರೇಡ್-೨ ತಹಸೀಲ್ದಾರ್ ಎ.ಎ. ಮುಳಗುಂದಮಠ, ಉಪನೋಂದಣಾಧಿಕಾರಿ ಶರಣಪ್ಪ ಪವಾರ, ಕಂದಾಯ ನಿರೀಕ್ಷಕ ಬಸವರಾಜ ಕಾತ್ರಾಳ, ಶಿರಸ್ತೇದಾರ ಎಸ್.ಎಸ್. ಅಸ್ಕಿ ಸೇರಿದಂತೆ ಕಂದಾಯ ಇಲಾಖೆಯ ಸಿಬ್ಬಂದಿ ಉಪಸ್ಥಿತರಿದ್ದರು.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img