‘ಕೃಷ್ಣಂ ಪ್ರಣಯ ಸಖಿ’ಗೆ ದುಬೈನಲ್ಲೂ ಮಸ್ತ್ ರೆಸ್ಪಾನ್ಸ್; ಸ್ಪೆಷಲ್ ಶೋ ಹೌಸ್‌ಫುಲ್!

0
Spread the love

2024ರಲ್ಲಿ ಕನ್ನಡ ಚಿತ್ರರಂಗಕ್ಕೆ ಹೊಸ ಹುರುಪು ಕೊಟ್ಟ ಸಿನಿಮಾಗಳಲ್ಲಿ ‘ಕೃಷ್ಣಂ ಪ್ರಣಯ ಸಖಿ’ ಕೂಡ ಒಂದು. ಕಳೆದ ಆಗಸ್ಟ್ ತಿಂಗಳಲ್ಲಿ ತೆರೆಕಂಡ ಸಿನಿಮಾ ಗೋಲ್ಡನ್ ಸ್ಟಾರ್ ಗಣೇಶ್ ಸಿನಿಮಾ ಬಾಕ್ಸಾಫೀಸ್‌ನಲ್ಲಿ ಉತ್ತಮ ಕಲೆಕ್ಷನ್ ಮಾಡಿದೆ.

Advertisement

ಪ್ರಶಾಂತ್ ಜಿ ರುದ್ರಪ್ಪ ನಿರ್ಮಾಣದ, ಶ್ರೀನಿವಾಸರಾಜು ನಿರ್ದೇಶನದ ಹಾಗೂ ಗೋಲ್ಡನ್ ಸ್ಟಾರ್ ಗಣೇಶ್ ನಾಯಕರಾಗಿ ನಟಿಸಿರುವ “ಕೃಷ್ಣಂ ಪ್ರಣಯ ಸಖಿ” ಚಿತ್ರ ರಾಜ್ಯಾದ್ಯಂತ ಯಶಸ್ವಿ ಪ್ರದರ್ಶನ ಕಾಣುತ್ತಿದೆ.

ಇದೇ ಸಂದರ್ಭದಲ್ಲಿ ಈ ಯಶಸ್ವಿ ಚಿತ್ರ ಅಬುದಾಬಿ ಹಾಗೂ ದುಬೈನಲ್ಲೂ ಪ್ರದರ್ಶನಗೊಂಡಿದೆ. ಅಲ್ಲಿನ ಕನ್ನಡಿಗರು ಅಪ್ಪಟ ಮನೋರಂಜನೆಯ ಈ ಚಿತ್ರಕ್ಕೆ ಫಿದಾ ಆಗಿದ್ದಾರೆ. ಇತ್ತೀಚೆಗೆ ದುಬೈನಲ್ಲಿ ರಶ್ಮಿ ವೆಂಕಟೇಶ್ , ಸೆಂದಿಲ್ ಮತ್ತು ತಂಡದವರು “ಕೃಷ್ಣಂ ಪ್ರಣಯ ಸಖಿ” ಚಿತ್ರದ ವಿಶೇಷ ಪ್ರದರ್ಶನ ಆಯೋಜಿಸಿದ್ದರು.

ಗೋಲ್ಡನ್ ಸ್ಟಾರ್ ಗಣೇಶ್, ನಾಯಕಿ ಮಾಳವಿಕ ನಾಯರ್, ನಟ ರಂಗಾಯಣ ರಘು, ನಿರ್ದೇಶಕ ಶ್ರೀನಿವಾಸರಾಜು, ನಿರ್ಮಾಪಕ ಪ್ರಶಾಂತ್ ಜಿ ರುದ್ರಪ್ಪ ಸೇರಿದಂತೆ ಚಿತ್ರತಂಡದ ಸದಸ್ಯರು ಈ ವಿಶೇಷ ಪ್ರದರ್ಶನದಲ್ಲಿ ಭಾಗವಹಿಸಿದ್ದರು.

ಸುಮಾರು 750ಕ್ಕೂ ಅಧಿಕ ಕನ್ನಡಿಗರು ಈ ಚಿತ್ರವನ್ನು ನೋಡಿ ಸಂಭ್ರಮಿಸಿದರು. ಚಿತ್ರದ ಹಾಡುಗಳಿಗೆ ಹೆಜ್ಜೆ ಹಾಕಿದರು. ನಮ್ಮ ಚಿತ್ರಕ್ಕೆ ನೀವು ನೀಡುತ್ತಿರುವ ಪ್ರೋತ್ಸಾಹಕ್ಕೆ ಮನ ತುಂಬಿ ಬಂದಿದೆ ಎಂದು ನಾಯಕ ಗೋಲ್ಡನ್ ಸ್ಟಾರ್ ಗಣೇಶ್ ಈ ಸಂದರ್ಭದಲ್ಲಿ ತಿಳಿಸಿದರು.

.


Spread the love

LEAVE A REPLY

Please enter your comment!
Please enter your name here