HomeKarnataka NewsKRS Dam Water Level: ಕೆಆರ್‌ಎಸ್ ನೀರಿನ ಮಟ್ಟ 105 ಅಡಿಗೆ ಏರಿಕೆ; ಮಂಡ್ಯ ರೈತರಲ್ಲಿ...

KRS Dam Water Level: ಕೆಆರ್‌ಎಸ್ ನೀರಿನ ಮಟ್ಟ 105 ಅಡಿಗೆ ಏರಿಕೆ; ಮಂಡ್ಯ ರೈತರಲ್ಲಿ ಸಂತಸ

For Dai;y Updates Join Our whatsapp Group

ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆ ಚುರುಕುಗೊಂಡಿರುವ ಹಿನ್ನೆಲೆಯಲ್ಲಿ ಸಕ್ಕರೆ ನಾಡು ಮಂಡ್ಯದ ರೈತರಲ್ಲಿ ಕೃಷಿ ಚಟುವಟಿಕೆಗಳ ಬಗ್ಗೆ ಹೊಸ ನಿರೀಕ್ಷೆ ಮೂಡಿದೆ.

ಕೆಆರ್‌ಎಸ್‌ ಜಲಾಶಯದ ನೀರಿನ ಮಟ್ಟ ಇದೀಗ 105 ಅಡಿಗೆ ಏರಿಕೆಯಾಗಿದ್ದು, ಮುಂಗಾರು ಬೆಳೆಗೆ ತಕ್ಷಣವೇ ನಾಲೆಗಳಿಗೆ ನೀರು ಹರಿಸುವಂತೆ ರೈತರು ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಕೆಲ ದಿನಗಳ ಹಿಂದೆ ಕೆಆರ್‌ಎಸ್‌ ಜಲಾಶಯದ ನೀರಿನ ಮಟ್ಟ 81 ಅಡಿಗೆ ಕುಸಿದಿದ್ದ ಸಂದರ್ಭದಲ್ಲಿ, ನೀರಿನ ಕೊರತೆ ಹಿನ್ನೆಲೆಯಲ್ಲಿ ಹೊಸ ಬೆಳೆ ಬಿತ್ತನೆ ಮಾಡದಂತೆ ಹಾಗೂ ಕುಡಿಯುವ ನೀರಿಗೆ ಆದ್ಯತೆ ನೀಡುವಂತೆ ಸರ್ಕಾರ ರೈತರಿಗೆ ಸೂಚನೆ ನೀಡಿತ್ತು.

ಆದರೆ ಇದೀಗ ಕೊಡಗು ಸೇರಿದಂತೆ ಕಾವೇರಿ ಜಲಾನಯನ ಪ್ರದೇಶಗಳಲ್ಲಿ ಉತ್ತಮ ಮಳೆಯಾಗುತ್ತಿದ್ದು, ಕೆಆರ್‌ಎಸ್‌ ಜಲಾಶಯಕ್ಕೆ ಭಾರಿ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದೆ. ಇದರ ಪರಿಣಾಮ ಡ್ಯಾಂನ ನೀರಿನ ಮಟ್ಟ 105 ಅಡಿಗೆ ತಲುಪಿದೆ.

ನೀರಿನ ಮಟ್ಟ ಏರಿಕೆಯಾಗುತ್ತಿದ್ದಂತೆ ಮಂಡ್ಯ ಜಿಲ್ಲೆಯ ರೈತರು ಕೃಷಿ ಚಟುವಟಿಕೆಗಳಿಗೆ ಸಿದ್ಧತೆ ನಡೆಸುತ್ತಿದ್ದಾರೆ. ಮುಂಗಾರು ಹಂಗಾಮಿನ ಬೆಳೆಗಳಿಗೆ ಅನುಕೂಲವಾಗುವಂತೆ ನಾಲೆಗಳಿಗೆ ನೀರು ಹರಿಸುವ ಬಗ್ಗೆ ಸರ್ಕಾರ ಶೀಘ್ರ ಅಧಿಕೃತ ಘೋಷಣೆ ಮಾಡಬೇಕು ಎಂದು ರೈತರು ಆಗ್ರಹಿಸಿದ್ದಾರೆ.

ಬಿತ್ತನೆಗೆ ಇದು ಸೂಕ್ತ ಸಮಯವಾಗಿದ್ದು, ನೀರು ಹರಿಸುವಲ್ಲಿ ವಿಳಂಬವಾದರೆ ಬೆಳೆ ನಷ್ಟವಾಗುವ ಆತಂಕ ರೈತರನ್ನು ಕಾಡುತ್ತಿದೆ.

ತುಂಗಭದ್ರಾ ಜಲಾಶಯಕ್ಕೂ ಜೀವಕಳೆ:

ಇದೇ ವೇಳೆ ಮೂರು ರಾಜ್ಯಗಳ ಒಂಬತ್ತು ಜಿಲ್ಲೆಗಳ ಜೀವನಾಡಿಯಾಗಿರುವ ತುಂಗಭದ್ರಾ ಜಲಾಶಯಕ್ಕೂ ಮಳೆ ನೀರಿನಿಂದ ಹೊಸ ಚೈತನ್ಯ ಬಂದಿದೆ.

ಕೊಪ್ಪಳ ತಾಲೂಕಿನ ಮುನಿರಾಬಾದ್‌ ಬಳಿ ಇರುವ ತುಂಗಭದ್ರಾ ಜಲಾಶಯಕ್ಕೆ ಮಲೆನಾಡು ಭಾಗದಲ್ಲಿ ಸುರಿಯುತ್ತಿರುವ ನಿರಂತರ ಮಳೆಯಿಂದ ಭಾರಿ ಪ್ರಮಾಣದ ಒಳಹರಿವು ದಾಖಲಾಗುತ್ತಿದೆ.

ಮಳೆ ಕೊರತೆಯಿಂದ ಖಾಲಿಯಾಗಿದ್ದ ಜಲಾಶಯದಲ್ಲಿ ಇದೀಗ ನೀರಿನ ಮಟ್ಟ ವೇಗವಾಗಿ ಏರಿಕೆಯಾಗುತ್ತಿದ್ದು, ರೈತರಲ್ಲಿ ಮತ್ತೆ ಆಶಾಭಾವನೆ ಮೂಡಿದೆ.

105 ಟಿಎಂಸಿ ಸಾಮರ್ಥ್ಯದ ತುಂಗಭದ್ರಾ ಜಲಾಶಯದಲ್ಲಿ ಸದ್ಯ 51.145 ಟಿಎಂಸಿ ನೀರು ಸಂಗ್ರಹವಾಗಿದೆ. ಜಲಾಶಯಕ್ಕೆ 91 ಸಾವಿರಕ್ಕೂ ಅಧಿಕ ಕ್ಯೂಸೆಕ್ ಒಳಹರಿವು ದಾಖಲಾಗಿದ್ದು, ಒಂದೇ ದಿನದಲ್ಲಿ ಸುಮಾರು 7 ಟಿಎಂಸಿ ನೀರು ಹೆಚ್ಚಾಗಿದೆ.

44 ಟಿಎಂಸಿಯಷ್ಟಿದ್ದ ನೀರಿನ ಸಂಗ್ರಹ ಇದೀಗ 51 ಟಿಎಂಸಿಗೆ ಏರಿಕೆಯಾಗಿದ್ದು, ಮುಂದಿನ ದಿನಗಳಲ್ಲಿ ಒಳಹರಿವು ಮುಂದುವರಿದರೆ ಜಲಾಶಯ ಮತ್ತಷ್ಟು ಭರ್ತಿಯಾಗುವ ನಿರೀಕ್ಷೆಯಿದೆ.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img