ಹಾಸನ:- ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಎಡೇಗೌಡನಹಳ್ಳಿ ಬಳಿ ಕೆಎಸ್ಆರ್‌ಟಿಸಿ ಬಸ್-ಬೈಕ್ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಮೂವರು ಯುವಕರು ಸಾವನ್ನಪ್ಪಿರುವ ಘಟನೆ ಜರುಗಿದೆ.
Advertisement
ಇರ್ಫಾನ್(25), ತರುಣ್(26) ಮತ್ತು ರೇವಂತ್(27) ಮೃತ ಯುವಕರು. ಇವರು ಹೊಳೆನರಸೀಪುರ ಪಟ್ಟಣದ ಹೇಮಾವತಿ ಬಡಾವಣೆಯ ನಿವಾಸಿಗಳು ಎನ್ನಲಾಗುತ್ತಿದೆ. ಕೆಎಸ್ಆರ್‌ಟಿಸಿ ಬಸ್ ಹಾಸನದಿಂದ ಮೈಸೂರು ಕಡೆಗೆ ಹೊರಟಿತ್ತು. ಮೈಸೂರು ಕಡೆಯಿಂದ ಒಂದೇ ದ್ವಿಚಕ್ರ ವಾಹನದಲ್ಲಿ ಮೂವರು ಯುವಕರು ಬರುತ್ತಿದ್ದರು. ಈ ವೇಳೆ ಭೀಕರ ಅಪಘಾತ ಸಂಭವಿಸಿದೆ.
ಇನ್ನು ಡಿಕ್ಕಿ ರಭಸಕ್ಕೆ ಓರ್ವ ಯುವಕ ಸ್ಥಳದಲ್ಲೇ ಸಾವನ್ನಪ್ಪಿದ್ದು, ಇನ್ನಿಬ್ಬರು ಆಸ್ಪತ್ರೆಗೆ ಸಾಗಿಸುವಾಗ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.