ಮಂಡ್ಯ: KSRTC ಬಸ್ ಹಾಗೂ ಕಾರಿನ ನಡುವೆ ಡಿಕ್ಕಿಯಾಗಿ ಓರ್ವ ಸಾವನ್ನಪ್ಪಿದ್ದು, 15 ಕ್ಕೂ ಹೆಚ್ಚು ಮಂದಿಗೆ ಗಾಯಗಳಾಗಿರುವ ಘಟನೆ ಮಂಡ್ಯ ಜಿಲ್ಲೆ ಮದ್ದೂರು ತಾಲ್ಲೂಕಿನ ಮಾಚಹಳ್ಳಿ ಗ್ರಾಮದ ಸಮೀಪ ನಡೆದಿದೆ. ಚನ್ನಪಟ್ಟಣದ ಚಾಮುಂಡೇಶ್ವರಿ ದೇವಾಲಯದಿಂದ ಬಸ್ ನಲ್ಲಿ ಮದ್ದೂರಿಗೆ ನೂರಕ್ಕೂ ಹೆಚ್ಚು ಭಕ್ತಾದಿಗಳು ಬರ್ತಿದ್ದರು.
ಮದ್ದೂರಿನಿಂದ ತುಮಕೂರು ಕಡೆಗೆ ಹೋಗುತ್ತಿದ್ದ ಕಾರಿಗೆ ಚಾಲಕನ ನಿಯಂತ್ರಣ ತಪ್ಪಿ ಡಿಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಕಾರಿನ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೊಬ್ಬ ಮಹಿಳೆಗೆ ಗಂಭೀರ ಗಾಯಗಳಾಗಿದೆ. ಮಹಿಳೆಯನ್ನು ಹೆಚ್ಚಿನ ಚಿಕಿತ್ಸೆಗೆ ಮಂಡ್ಯ ಮಿಮ್ಸ್ ಆಸ್ಪತ್ರೆಗೆ ರವಾನೆ ಮಾಡಿಲಾಗಿದೆ.
ಇನ್ನೂ ಬಸ್ ನಲ್ಲಿದ್ದ 15 ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯಗಳಾಗಿದ್ದು, ಗಾಯಾಳುಗಳಿಗೆ ಮದ್ದೂರು ಪಟ್ಟಣದ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಸ್ಥಳಕ್ಕೆ ಕೆಸ್ತೂರು ಪೊಲೀಸರ ಭೇಟಿ ಪರಿಶೀಲನೆ ನಡೆಸಿದ್ದು, ಈ ಸಂಬಂಧ ಕೆಸ್ತೂರು ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.


