HomeKarnataka NewsKSRTC ಬಸ್‌ ಚಲಾಯಿಸುವಾಗಲೇ ಹೃದಯಾಘಾತ: ಪ್ರಯಾಣಿಕರ ರಕ್ಷಣೆ ಮಾಡಿ ಮೃತಪಟ್ಟ ಚಾಲಕ!

KSRTC ಬಸ್‌ ಚಲಾಯಿಸುವಾಗಲೇ ಹೃದಯಾಘಾತ: ಪ್ರಯಾಣಿಕರ ರಕ್ಷಣೆ ಮಾಡಿ ಮೃತಪಟ್ಟ ಚಾಲಕ!

For Dai;y Updates Join Our whatsapp Group

Spread the love

ನೆಲಮಂಗಲ:‌ ಬಸ್ ಚಲಾಯಿಸುವಾಗ ಎದೆನೋವು ಕಾಣಿಸಿಕೊಂಡರೂ ಪ್ರಯಾಣಿಕರ ಪ್ರಾಣ ಕಾಪಾಡಲು ಬಸ್ ನಿಲ್ಲಿಸಿ, ಬಳಿಕ ಪ್ರಾಣ ಬಿಟ್ಟಿರುವ ಹೃದಯವಿದ್ರಾವಕ ಘಟನೆ ಬೆಂಗಳೂರು ಹೊರವಲಯದ ನೆಲಮಂಗಲ ಟೋಲ್ ಬಳಿ ನಡೆದಿದೆ.

ಉತ್ತರ ಕರ್ನಾಟಕ ಮೂಲದ ರಾಜೀವ್ ಬಿರಾದಾರ್ (50) ಮೃತ  ಚಾಲಕನಾಗಿದ್ದು, ಬೆಂಗಳೂರಿಂದ ಹರಿಹರಕ್ಕೆ ಹೋಗುತ್ತಿದ್ದ ಕೆಎಸ್ಆರ್​​ಟಿಸಿ ರಾಜಹಂಸ ಬಸ್ ಚಲಾಯಿಸುತ್ತಿದ್ದರು. ನೆಲಮಂಗಲದ ಜಾಸ್ ಟೋಲ್ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚರಿಸುತ್ತಿದ್ದಾಗ ಅವರಿಗೆ ಎದೆನೋವು ಕಾಣಿಸಿಕೊಂಡಿದೆ. ಸಮಯಪ್ರಜ್ಞೆ ಮೆರೆದ ಅವರು ತಕ್ಷಣವೇ ಬಸ್ಸನ್ನು ಹೆದ್ದಾರಿಯಲ್ಲಿ ಒಂದು ಬದಿಯಲ್ಲಿ ನಿಲ್ಲಿಸಿದ್ದಾರೆ.

ಇದರಿಂದ ಸಂಭಾವ್ಯ ಅಪಘಾತ ತಪ್ಪಿದ್ದು, ಪ್ರಯಾಣಿಕರು ಬಚಾವಾಗಿದ್ದಾರೆ. ಕೂಡಲೇ ಆ್ಯಂಬುಲೆನ್ಸ್​ಗೆ ಕರೆ ಮಾಡಲಾಯಿತಾದರೂ, ಅದು ಸ್ಥಳಕ್ಕೆ ಬರುವ ವೇಳೆಗೆ ಸೂಕ್ತ ಚಿಕಿತ್ಸೆ ಸಿಗದ ಕಾರಣ ರಾಜೀವ್ ಬಿರಾದಾರ್ ಅಸುನೀಗಿದರು. ಪ್ರಾಣ ಹೋಗುವ ನೋವಿನಲ್ಲೂ ಪ್ರಯಾಣಿಕರ ಪ್ರಾಣ ಉಳಿಸಿದ ಚಾಲಕನಿಗೆ ಜನ ಕಂಬನಿ ಮಿಡಿದಿದ್ದಾರೆ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!