ಹಾಸನ, ಜೂನ್ 15: ಹಾಸನ ಚನ್ನಪಟ್ಟಣ ಬಸ್ ನಿಲ್ದಾಣದಲ್ಲಿ ಭಾನುವಾರ ರಾತ್ರಿ KSRTC ಬಸ್ ನಿಯಂತ್ರಣ ತಪ್ಪಿ ಪ್ಲಾಟ್‌ಫಾರ್ಮ್‌ಗೆ ನುಗ್ಗಿದ ಪರಿಣಾಮ ಭೀಕರ ಅಪಘಾತ ಸಂಭವಿಸಿದೆ.
ಈ ವೇಳೆ ಬಸ್‌ಗಾಗಿ ಕಾಯುತ್ತಿದ್ದ ಚಿಕ್ಕಮಗಳೂರು ಮೂಲದ ಮಂಜುನಾಥ್ ಎಂಬ ಯುವಕ ಬಸ್‌ಗೆ ಡಿಕ್ಕಿಯಾಗಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರನ್ನು ತಕ್ಷಣ ಹಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಮಾಹಿತಿಯಂತೆ, ಬೆಂಗಳೂರು–ಧರ್ಮಸ್ಥಳ ಮಾರ್ಗದಲ್ಲಿ ಸಂಚರಿಸುತ್ತಿದ್ದ KSRTC ಬಸ್ ಚಾಲಕನ ನಿಯಂತ್ರಣ ತಪ್ಪಿ ನೇರವಾಗಿ ನಿಲ್ದಾಣದ ಒಳಗೆ ನುಗ್ಗಿದೆ. ಪ್ಲಾಟ್‌ಫಾರ್ಮ್‌ನಲ್ಲಿ ಕುಳಿತಿದ್ದ ಮಂಜುನಾಥ್ ಅವರಿಗೆ ಬಸ್ ಢಿಕ್ಕಿ ಹೊಡೆದಿದೆ.
ಘಟನೆಯ ನಂತರ ನಿಲ್ದಾಣದಲ್ಲಿ ಕೆಲಕಾಲ ಗೊಂದಲ ಮತ್ತು ಆತಂಕದ ವಾತಾವರಣ ಉಂಟಾಗಿದೆ. ಚಾಲಕನ ಅಜಾಗರೂಕತೆ ಮತ್ತು ಅತಿವೇಗವೇ ಅಪಘಾತಕ್ಕೆ ಕಾರಣ ಎಂಬ ಆರೋಪ ಕೇಳಿಬಂದಿದೆ.
ಹಾಸನ ಬಡಾವಣೆ ಪೊಲೀಸ್ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿ ತನಿಖೆ ಆರಂಭಿಸಿದ್ದಾರೆ.



