ಮಂಡ್ಯ: ಚಾಲಕನ ನಿಯಂತ್ರಣ ತಪ್ಪಿ KSRTC ಬಸ್ ಪಲ್ಟಿಯಾಗಿದ್ದು, ಬಸ್ ನಲ್ಲಿದ್ದ 25 ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿರುವ ಘಟನೆ ನಡೆದಿದೆ. ಮಂಡ್ಯದ ಮದ್ದೂರು ತಾಲೂಕಿನ ನಿಢಘಟ್ಟ ಬಳಿಯ ಹಳೇ ಮೈ – ಬೆಂ ಹೆದ್ದಾರಿಯ ಸರ್ವಿಸ್ ರಸ್ತೆಯಲ್ಲಿ ಈ ಘಟನೆ ನಡೆದಿದೆ.
ಚಾಲಕನ ನಿಯಂತ್ರಣ ತಪ್ಪಿ ರೋಡ್ ಡಿವೈಡರ್ ಗೆ ಡಿಕ್ಕಿಯಾಗಿ ಬಸ್ ಪಲ್ಟಿಯಾಗಿದೆ ಎಂದು ತಿಳಿದು ಬಂದಿದೆ. ಗಾಯಗೊಂಡ ಪ್ರಯಾಣಿಕರಿಗೆ ಮದ್ದೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದ್ದು,
ಗಂಭೀರವಾಗಿ ಗಾಯಗೊಂಡ ಇಬ್ಬರನ್ನು ಮಂಡ್ಯ ಮಿಮ್ಸ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಮದ್ದೂರು ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ಬಸ್ ಪಲ್ಟಿ ಹೊಡೆದ ಸುದ್ದಿ ತಿಳಿದು ಉಸ್ತುವಾರಿ ಸಚಿವ ಎನ್ ಚೆಲುವರಾಯಸ್ವಾಮಿ ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದು, ಸ್ಥಳೀಯರಿಂದ ಮಾಹಿತಿ ಪಡೆದುಕೊಂಡಿದ್ದಾರೆ. ಮದ್ದೂರು ಸಾರ್ವಜನಿಕ ಆಸ್ಪತ್ರೆಗೆ ಜಿಲ್ಲಾಧಿಕಾರಿ ಡಾ ಕುಮಾರ್ ಭೇಟಿ ನೀಡಿ ಗಾಯಳುಗಳ ಯೋಗ ಕ್ಷೇಮ ವಿಚಾರಣೆ ಮಾಡಿದರು.