HomeKarnataka Newsಮಹದೇಶ್ವರ ಬೆಟ್ಟ ಬಳಿ KSRTC ಬಸ್ ಪಲ್ಟಿ: 20ಕ್ಕೂ ಹೆಚ್ಚು ಮಂದಿಗೆ ಗಾಯ!

ಮಹದೇಶ್ವರ ಬೆಟ್ಟ ಬಳಿ KSRTC ಬಸ್ ಪಲ್ಟಿ: 20ಕ್ಕೂ ಹೆಚ್ಚು ಮಂದಿಗೆ ಗಾಯ!

For Dai;y Updates Join Our whatsapp Group

ಚಾಮರಾಜನಗರ:-ಚಾಲಕನ ನಿಯಂತ್ರಣ ತಪ್ಪಿ ಕೆಎಸ್‌ಆರ್‌ಟಿಸಿ ಬಸ್ ಪಲ್ಟಿಯಾದ ಪರಿಣಾಮ 20ಕ್ಕೂ ಹೆಚ್ಚು ಜನ ಪ್ರಯಾಣಿಕರಿಗೆ ಗಾಯವಾಗಿರುವ ಘಟನೆ ಜಿಲ್ಲೆಯ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟದ ಬಳಿ ಜರುಗಿದೆ.

ಬೆಟ್ಟದಿಂದ ಮೈಸೂರಿಗೆ ತೆರಳುತ್ತಿದ್ದ ಕೆಎಸ್ಆರ್ ಟಿಸಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದಿದೆ. ರಾಜ್ಯದ ನಾನಾ ಕಡೆಗಳಿಂದ ಮಲೆ ಮಹದೇಶ್ವರ ಬೆಟ್ಟಕ್ಕೆ ಆಗಮಿಸಿ ದೇವರ ದರ್ಶನ ಪಡೆದು ವಾಪಸ್ ತೆರಳುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ ತಾಳುಬೆಟ್ಟ ಮಹದೇಶ್ವರಬೆಟ್ಟ ಮಾರ್ಗ ಸಮೀಪ ಈ ಅವಘಡ ಸಂಭವಿಸಿದೆ. ತಕ್ಷಣ ದಾರಿ ಹೋಕರು ತುರ್ತು ಆಂಬುಲೆನ್ಸ್ ಹಾಗೂ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಈ ವೇಳೆ ಘಟನೆ ನಡೆದ ಹಲವು ಅರ್ಧ ತಾಸುಗಳು ಆ್ಯಂಬುಲೆನ್ಸ್ ಸಿಗದೇ ಪರದಾಡಿದ್ದಾರೆ.

ಬಳಿಕ ಪ್ರಾಧಿಕಾರದ ಆ್ಯಂಬುಲೆನ್ಸ್ ಸೇರಿ ಖಾಸಗಿ ವಾಹನದ ಮುಖಾಂತರ ಕೊಳ್ಳೇಗಾಲ ಆಸ್ಪತ್ರೆಗೆ ಗಾಯಾಳುಗಳನ್ನು ಚಿಕಿತ್ಸೆಗೆ ದಾಖಲಿಸಲಾಗಿದೆ.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img