HomeKarnataka Newsಕುಮಟಾ ದೇವಿಮನೆ ಘಟ್ಟದಲ್ಲಿ ಕಂದಕಕ್ಕೆ ಉರುಳಿದ ಕೆಎಸ್‌ಆರ್‌ಟಿಸಿ ಬಸ್; 12 ಮಂದಿ ಗಾಯ

ಕುಮಟಾ ದೇವಿಮನೆ ಘಟ್ಟದಲ್ಲಿ ಕಂದಕಕ್ಕೆ ಉರುಳಿದ ಕೆಎಸ್‌ಆರ್‌ಟಿಸಿ ಬಸ್; 12 ಮಂದಿ ಗಾಯ

For Dai;y Updates Join Our whatsapp Group

ಕುಮಟಾ: ಬಾಗಲಕೋಟೆಯಿಂದ ಧರ್ಮಸ್ಥಳಕ್ಕೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ದೇವಿಮನೆ ಘಟ್ಟದ ಬಳಿ ಕಂದಕಕ್ಕೆ ಉರುಳಿಬಿದ್ದಿದೆ.

ಗುರುವಾರ ರಾತ್ರಿ ನಡೆದ ಈ ಅಪಘಾತದಲ್ಲಿ ಬಸ್‌ನಲ್ಲಿದ್ದ 12 ಮಂದಿ ಪ್ರಯಾಣಿಕರು ಗಾಯಗೊಂಡಿದ್ದಾರೆ.

ದೇವಿಮನೆ ಘಟ್ಟದಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಬಸ್ ಆಳವಾದ ಕಂದಕಕ್ಕೆ ಉರುಳಿಬಿದ್ದಿದೆ ಎನ್ನಲಾಗಿದೆ. ಅಪಘಾತದಿಂದ ಸ್ಥಳದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು.

ಅಪಘಾತದ ಮಾಹಿತಿ ತಿಳಿಯುತ್ತಿದ್ದಂತೆ ಕುಮಟಾ ಠಾಣೆಯ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಗಾಯಾಳುಗಳನ್ನು ತಕ್ಷಣ ಕುಮಟಾದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಈ ಸಂಬಂಧ ಕುಮಟಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅಪಘಾತಕ್ಕೆ ನಿಖರ ಕಾರಣವೇನು ಎಂಬುದರ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img