ಮಂಡ್ಯ: KSRTC ಬಸ್ಸೊಂದು ಭತ್ತದ ಗದ್ದೆಗೆ ನುಗ್ಗಿದ ಪರಿಣಾಮ 25ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡ ಘಟನೆ ತಾಲ್ಲೂಕಿನ ಶಿವಳ್ಳಿ- ಹಾಡ್ಯ ನಡುವೆ ಜರುಗಿದೆ.
Advertisement
ಮಂಡ್ಯದಿಂದ ಪಾಂಡವಪುರಕ್ಕೆ ತೆರಳುತ್ತಿದ್ದ ವೇಳೆ, ಎದುರಿನಿಂದ ಬರುತ್ತಿದ್ದ ಮತ್ತೊಂದು ವಾಹನಕ್ಕೆ ಜಾಗ ಬಿಡುವ ಪ್ರಯತ್ನದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಭತ್ತದ ಗದ್ದೆಗೆ ನುಗ್ಗಿ ಪಲ್ಟಿಯಾಗಿದೆ.
ಬಸ್‌ನಲ್ಲಿ 35 ಪ್ರಯಾಣಿಕರು ಇದ್ದರು. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಎಲ್ಲರನ್ನು ಸ್ಥಳೀಯರ ನೆರವಿನಿಂದ ಆಂಬುಲೆನ್ಸ್ ಮತ್ತು ಖಾಸಗಿ ವಾಹನಗಳ ಮೂಲಕ ಮಂಡ್ಯ ಜಿಲ್ಲಾಸ್ಪತ್ರೆಗೆ ಕರೆತಂದು ಚಿಕಿತ್ಸೆ ಕೊಡಿಸಲಾಗಿದೆ. ಸಣ್ಣಪುಟ್ಟ ಗಾಯಗಳಿಗೆ ಒಳಗಾಗಿದ್ದ ಕೆಲವರು ಚಿಕಿತ್ಸೆ ಪಡೆದು ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ.
ಶಿವಳ್ಳಿ ಠಾಣೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.