ಚಾಮರಾಜನಗರ:- ಗಂಡಸರಿಗೆ ಫ್ರೀ ಬಸ್ ಟಿಕೆಟ್ ಕೊಡುವ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ನಗರದಲ್ಲಿ ಪ್ರತಿಕ್ರಿಯೆ ಕೊಟ್ಟಿದ್ದಾರೆ.
Advertisement
ಚಾಮರಾಜನಗರದಲ್ಲಿ ಆಸ್ಪತ್ರೆ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಕೊಟ್ಟಿದ್ದೇವೆ. ಅದರಿಂದ ಮಹಿಳೆಯರಿಗೆ ಹಣ ಉಳಿತಾಯವಾಗುತ್ತದೆ. ಆ ಹಣದಿಂದ ಬೇರೆನಾದರೂ ಖರೀದಿಸಬಹುದು ಎಂದು ಹೇಳಿದರು. ಇದೇ ಸಂದರ್ಭದಲ್ಲಿ ಗಂಡಸರಿಗೂ ಫ್ರೀ ಕೊಡಿ ಎಂದು ಸ್ಥಳೀಯರೊಬ್ಬರು ಕೇಳಿದರು. ಇದಕ್ಕೆ ಪ್ರತಿಕ್ರಿಯಿಸಿದ ಅವರು, ಗಂಡಸರಿಗೆ ಬಸ್‌ನಲ್ಲಿ ಫ್ರೀ ಕೊಟ್ರೆ ಕೆಎಸ್ಆರ್‌ಟಿಸಿ ಮುಚ್ಚಬೇಕಾಗುತ್ತೆ ಎಂದು ಹೇಳಿದರು.
ಗಂಡಸರಿಗೂ ಫ್ರೀ ಬಸ್ ಟಿಕೆಟ್ ವ್ಯವಸ್ಥೆ ಕಲ್ಪಿಸುವಂತೆ ಬೇಡಿಕೆ ಬಂದಿದೆ. ಆದರೆ ಮಹಿಳೆಯರ ರೀತಿ ಗಂಡಸರಿಗೂ ಫ್ರೀ ಬಸ್ ಟಿಕೆಟ್ ಕೊಟ್ರೆ ಕಂಪ್ಲೀಟಾಗಿ ಕೆಎಸ್ಆರ್‌ಟಿಸಿ ಮುಚ್ಚಬೇಕಾಗುತ್ತೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.