ವಿಜಯಸಾಕ್ಷಿ ಸುದ್ದಿ, ಗದಗ: ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ 76ನೇ ಗಣರಾಜ್ಯೋತ್ಸವದ ಅಂಗವಾಗಿ ಜರುಗಿದ ಸಾಧಕರ ಸನ್ಮಾನ ಕಾರ್ಯಕ್ರಮದಲ್ಲಿ ವಿಕಲಚೇತನರ ಕ್ಷೇತ್ರದ ಸೇವೆಗಾಗಿ ರಾಜ್ಯ ಪ್ರಶಸ್ತಿ ಪಡೆದ ಮುಂಡರಗಿಯ ವಿಜಯಕುಮಾರ ಬಣಕಾರ ಹಾಗೂ ಸಾಮಾಜಿಕ ಕ್ಷೇತ್ರದಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದಕ್ಕಾಗಿ ಲಕ್ಮೇಶ್ವರದ ಕರಿಯಪ್ಪ ಶಿರಹಟ್ಟಿ ಅವರುಗಳನ್ನು ಸನ್ಮಾನಿಸಲಾಯಿತು.
Advertisement
ಈ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಚ್.ಕೆ. ಪಾಟೀಲ, ವಿಧಾನ ಪರಿಷತ್ ಸದಸ್ಯ ಎಸ್.ವಿ. ಸಂಕನೂರ, ನಗರಾಬಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕಬರಸಾಬ ಬಬರ್ಚಿ, ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭರತ್ ಎಸ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ಎಸ್. ನೇಮಗೌಡ, ಉಪ ಅರಣ್ಯ ಸಂರಕ್ಷಣಾಧಿಕಾರಿ ಸಂತೋಷ ಕೆಂಚಪ್ಪನವರ, ಅಪರ ಜಿಲ್ಲಾಧಿಕಾರಿ ಅನ್ನಪೂರ್ಣ ಎಂ ಮುಂತಾದವರು ಉಪಸ್ಥಿತರಿದ್ದರು.