ಮಂಡ್ಯ: ಜೆಡಿಎಸ್ ಹಾಗೂ ಬಿಜೆಪಿ ಪಾದಯಾತ್ರೆ ನನಗೆ ವರವಾಗಿದೆ. ಅವರ ಅಸೂಹೆ, ಅಕ್ರಮಗಳನ್ನ ಜನರ ಮುಂದಿಡಲು ನನಗೆ ಅವಕಾಶ ಸಿಕ್ಕಿದೆ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಹೇಳಿದ್ದಾರೆ. ಮದ್ದೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಮ್ಮ ವಿರುದ್ಧದ ಅಕ್ರಮದ ದಾಖಲೆ ಬಿಡುಗಡೆ ಮಾಡುವುದಾಗಿ ನೀಡಿದ್ದ ಹೆಚ್‍ಡಿಕೆ ಹೇಳಿಕೆಗೆ ತಿರುಗೇಟು ಕೊಟ್ಟಿದ್ದಾರೆ. ಈ ವೇಳೆ, ಕುಮಾರಸ್ವಾಮಿ ಕುತಂತ್ರ 20 ವರ್ಷಗಳಿಂದ ನಡೆಯುತ್ತಿದೆ.
ಇಡಿ, ಸಿಬಿಐ ಏನೇನೂ ಬೇಕು ಎಲ್ಲವನ್ನೂ ಜಾಲಾಡ್ತಿದ್ದಾರೆ. ಅದೇ ರೀತಿ ಹೆಚ್‍ಡಿಕೆ ಸಹ ಅದನ್ನೇ ಮಾಡ್ತಿದ್ದಾರೆ. ನನ್ನ ಬದುಕು ತೆರೆದ ಪುಸ್ತಕ, ನನಗೆ ತೊಂದರೆ ಇಲ್ಲ. ಜೆಡಿಎಸ್ ಹಾಗೂ ಬಿಜೆಪಿ ಪಾದಯಾತ್ರೆ ನನಗೆ ವರವಾಗಿದೆ. ಅವರ ಅಸೂಹೆ, ಅಕ್ರಮಗಳನ್ನ ಜನರ ಮುಂದಿಡಲು ನನಗೆ ಅವಕಾಶ ಸಿಕ್ಕಿದೆ ಎಂದಿದ್ದಾರೆ. ಬಹಿರಂಗ ಚರ್ಚೆಗೆ ಕುಮಾರಸ್ವಾಮಿ ಆಹ್ವಾನ ವಿಚಾರವಾಗಿ, ಚಾಮುಂಡಿ ಬೆಟ್ಟಕ್ಕೆ ಬೇಡ, ಅಸೆಂಬ್ಲಿಗೆ ಬರಲಿ. ಕುಮಾರಸ್ವಾಮಿ ಅಸೆಂಬ್ಲಿಗೆ ಬರಲು ಆಗಲ್ಲ, ಅವರ ಅಣ್ಣನನ್ನ ಕಳುಹಿಸಲಿ ಎಂದು ಅವರು ಅಕ್ರೋಶ ಹೊರಹಾಕಿದ್ದಾರೆ.