ಪ್ರಯಾಗರಾಜ್:- ಕುಂಭಮೇಳದಲ್ಲಿ ಸಂಭವಿಸಿದ್ದು ಎನ್ನಲಾದ ಕಾಲ್ತುಳಿತದಲ್ಲಿ ಸಾವನ್ನಪ್ಪಿದ ಮೃತರ ಕುಟುಂಬಗಳಿಗೆ ಯುಪಿ ಸಿಎಂ ಯೋಗಿ ಆದಿತ್ಯನಾಥ್ ಅವರು ತಲಾ 25 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ. ಅಲ್ಲದೇ ನ್ಯಾಯಾಂಗ ತನಿಖೆಗೆ ಆದೇಶಿಸಿದ್ದಾರೆ.
ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಬರೆದುಕೊಳ್ಳುವ ಮೂಲಕ ಯೋಗಿ ಆದಿತ್ಯನಾಥ್ ಮಾಹಿತಿ ನೀಡಿದ್ದಾರೆ. ಕುಂಭಮೇಳದ ಕಾಲ್ತುಳಿತದಲ್ಲಿ 90ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಮತ್ತು 30 ಜನರು ಸಾವನ್ನಪ್ಪಿದ್ದಾರೆ. ದುರಂತದ ಘಟನೆ ಬಗ್ಗೆ ತನಿಖೆಗಾಗಿ ಮುಖ್ಯ ಕಾರ್ಯದರ್ಶಿ ಮತ್ತು ಡಿಜಿಪಿ ಜನವರಿ 30ರಂದು ಮಹಾ ಕುಂಭ ಮೇಳಕ್ಕೆ ಭೇಟಿ ನೀಡಲಿದ್ದಾರೆ ಎಂದು ಸಿಎಂ ಆದಿತ್ಯನಾಥ್ ಹೇಳಿದ್ದಾರೆ.
ಘಟನೆಯ ಬಗ್ಗೆ ನ್ಯಾಯಾಂಗ ತನಿಖೆ ನಡೆಸಲಾಗುವುದು. ತನಿಖೆ ನಡೆಸಿ ವರದಿ ನೀಡುವಂತೆ ಆಯೋಗಕ್ಕೆ ಹೇಳಿದ್ದೇವೆ. ಕಾಲಮಿತಿಯೊಳಗೆ ವರದಿ ಸಲ್ಲಿಸುವಂತೆ ಸೂಚಿಸಲಾಗಿದೆ ಎಂದು ಹೇಳಿದ್ದಾರೆ.



