ರೈತ ಹೋರಾಟಗಾರ ಕುರುಬೂರ್ ಶಾಂತಕುಮಾರ್ ಕಾರು ಅಪಘಾತ: ಆಸ್ಪತ್ರೆಗೆ ದಾಖಲು!

0
Spread the love

ನವದೆಹಲಿ:- ಪಂಜಾಬ್​​ನ ಪಟಿಯಾಲ ರಸ್ತೆಯಲ್ಲಿ ರಾಜ್ಯ ರೈತ ಸಂಘಟನೆಗಳ ಒಕ್ಕೂಟದ ರಾಜ್ಯಾಧ್ಯಕ್ಷ ಕುರುಬೂರ್ ಶಾಂತಕುಮಾರ್ ಪ್ರಯಾಣಿಸುತ್ತಿದ್ದ ಕಾರು ಅಪಘಾತ ಆಗಿರುವ ಘಟನೆ ಜರುಗಿದೆ.

Advertisement

ದೆಹಲಿಯ ಕನೋಲಿ ಬಾರ್ಡರ್ ನಲ್ಲಿ ವಿವಿಧ ಬೇಡಿಕೆಗಳ ಆಗ್ರಹಿಸಿ ಒಂದು ವರ್ಷದಿಂದ ಪ್ರತಿಭಟನೆ ನಡೆಯುತ್ತಿದ್ದು, ಈ ಸಂಬಂಧ ಇಂದು ದೆಹಲಿಯಲ್ಲಿ ಕರೆಯಲಾಗಿದ್ದ ಸಭೆಗೆ ತೆರಳುತ್ತಿದ್ದ ವೇಳೆ ಮಾರ್ಗ ಮಧ್ಯೆ ಈ ದುರ್ಘಟನೆ ಸಂಭವಿಸಿದೆ. ಪರಿಣಾಮ ಘಟನೆಯಲ್ಲಿ ಕುರುಬೂರ್ ಶಾಂತಕುಮಾರ್ ಹಾಗೂ ತಮಿಳುನಾಡಿನ ಪಾಂಡಿಯನ್ ಅವರಿಗೆ ಗಾಯಗಳಾಗಿದ್ದು, ಕೂಡಲೇ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಅದೃಷ್ಟವಶಾತ್ ಕುರುಬೂರು ಶಾಂತಕುಮಾರ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

 


Spread the love

LEAVE A REPLY

Please enter your comment!
Please enter your name here