ವಿಜಯಸಾಕ್ಷಿ ಸುದ್ದಿ, ಗದಗ: ಕಟ್ಟಡ ನಿರ್ಮಾಣ ಕಾರ್ಮಿಕರ ಮಹಾಸಂಘ ಗದಗ-ಬೆಟಗೇರಿ ವತಿಯಿಂದ ಕಾರ್ಮಿಕ ದಿನಾಚರಣೆ ಅಂಗವಾಗಿ ಕಟ್ಟಡ ಕಾರ್ಮಿಕರು ಗುರುವಾರ ಭೂಮರೆಡ್ಡಿ ಸರ್ಕಲ್‌ನಿಂದ ಭೂಮರೆಡ್ಡಿ ಸರ್ಕಲ್, ರೋಟರಿ ಸರ್ಕಲ್, ಗಾಂಧಿ ಸರ್ಕಲ್ ಮಾರ್ಗವಾಗಿ ಡಿ.ಸಿ. ಮಿಲ್ ಕಂಪೌಂಡ್‌ವರೆಗೆ ಪಾದಯಾತ್ರೆ ನಡೆಸಿದರು.
Advertisement
ಗದಗ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಕೃಷ್ಣಗೌಡ ಎಚ್.ಪಾಟೀಲ ಹಾಗೂ ಕಟ್ಟಡ ನಿರ್ಮಾಣ ಕಾರ್ಮಿಕರ ಮಹಾಸಂಘದ ಅಧ್ಯಕ್ಷ ಮಾಬೂಖಾನ ಪಠಾಣ ಹಸಿರು ನಿಶಾನೆ ತೋರಿಸುವ ಮೂಲಕ ಪಾದಯಾತ್ರೆಗೆ ಚಾಲನೆ ನೀಡಿದರು.