ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಆರೋಪ ಹೊಂದಿರುವ ಸರ್ಕಾರಿ ಅಧಿಕಾರಿಗಳ ನಿವಾಸದ ಮೇಲೆ ಲೋಕಾಯುಕ್ತ ದಾಳಿ ನಡೆಸಿದೆ. ಟೌನ್ ಪ್ಲಾನಿಂಗ್ ನ ಅಸಿಸ್ಟೆಂಟ್ ಡೈರೆಕ್ಟರ್ ಬಾಗ್ಲಿ ಮಾರುತಿ ಮನೆಯಲ್ಲಿ ದಾಳಿ ನಡೆದಿದೆ.
Advertisement
ದುಬಾರಿ ಬೆಲೆಯ ವಾಚ್ಗಳು, ಕೋಟಿ ಬೆಲೆಬಾಳುವ ಬಂಗಾರ, ಲಕ್ಷಾಂತರ ಮೌಲ್ಯದ ಬೆಳ್ಳಿ ವಸ್ತುಗಳು, ನಗದು ಹಣ ಪತ್ತೆಯಾಗಿದ್ದು, ಸದ್ಯ ಲೋಕಾಯುಕ್ತ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ.
ಇನ್ನೂ ಇಂದು ಕರ್ನಾಟಕದ ಹಲವೆಡೆ ಬೆಳ್ಳಂ ಬೆಳಗ್ಗೆ ಲೋಕಾಯುಕ್ತ ದಾಳಿ ಮಾಡಿದೆ. ಆದಾಯಕ್ಕೂ ಮೀರಿ ಗಳಿಕೆ ಆರೋಪದಡಿ ಬೆಂಗಳೂರು, ಮೈಸೂರು, ಕೊಪ್ಪಳ ಮತ್ತು ಬಳ್ಳಾರಿಯ ಸರ್ಕಾರಿ ಅಧಿಕಾರಿಗಳಿಗಳ ಮನೆಗಳ ಮೇಲೆ ದಾಳಿ ಮಾಡಲಾಗಿದೆ.