ಕೋರ್ಟ್ ನಲ್ಲಿ ಕೆಲಸ ಕೊಡಿಸುವುದಾಗಿ ಅಮಾಯಕರಿಂದ ಲಕ್ಷ-ಲಕ್ಷ ವಂಚನೆ: FIR ದಾಖಲು!

0
Spread the love

ಕೊಪ್ಪಳ:- ಕೋರ್ಟ್ ನಲ್ಲಿ ಕೆಲಸ ಕೊಡಿಸುವುದಾಗಿ ಅಮಾಯಕರಿಂದ ಲಕ್ಷ-ಲಕ್ಷ ವಂಚಿಸಿದ ಆರೋಪಿ ವಿರುದ್ಧ ಸಿಸಿಬಿ ಠಾಣೆಯಲ್ಲಿ ಕೇಸ್ ದಾಖಲಾಗಿದೆ.

Advertisement

ಕೊಪ್ಪಳದಲ್ಲಿ ಘಟನೆ ಜರುಗಿದ್ದು, ಸಿದ್ದಲಿಂಗಯ್ಯ ಹಿರೇಮಠ ಎಂಬವನ ವಿರುದ್ಧ ವಂಚನೆ ಆರೋಪ ಮಾಡಲಾಗಿದೆ. ನ್ಯಾಯಾಲಯದಲ್ಲಿ ಪ್ರೋಸೆಸ್ ಸರ್ವರ್, ಜವಾನ ಹುದ್ದೆ ಖಾಲಿ ಇದೆ ಎಂದು ಜನರಿಗೆ ನಂಬಿಸುತ್ತಿದ್ದ. ಅಲ್ಲದೇ ಉದ್ಯೋಗ ಕೊಡಿಸುತ್ತೇನೆ ಎಂದು ಪ್ರತಿಯೊಬ್ಬರ ಬಳಿ 7 ಲಕ್ಷ ರೂ. ಹಣ ವಸೂಲಿ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ.

ಆರೋಪಿ ಹಣ ಪಡೆದವರಿಗೆ ನಕಲಿ ನೇಮಕಾತಿ ಪತ್ರ ಕೊಟ್ಟಿದ್ದಾನೆ. ಅಲ್ಲದೇ ನೇಮಕಾತಿ ಪತ್ರದಲ್ಲಿ ನ್ಯಾಯಮೂರ್ತಿಗಳ ಸಹಿಯನ್ನು ನಕಲಿ ಮಾಡಿದ್ದಾನೆ. ರಾಜ್ಯದ ಹಲವೆಡೆ ಇಂತಹ ಕೃತ್ಯ ಎಸಗಿದ್ದಾನೆ ಎಂದು ಆರೋಪಿಸಲಾಗಿದೆ.

ಈ ಸಂಬಂಧ ಬೆಂಗಳೂರು ಮೂಲದ ಅಬ್ದುಲ್ ರಜಾಕ್ ಎಂಬವರು ಸಿದ್ದಲಿಂಗಯ್ಯ ವಿರುದ್ಧ ಸಿಸಿಬಿ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.


Spread the love

LEAVE A REPLY

Please enter your comment!
Please enter your name here