ವಿಜಯಸಾಕ್ಷಿ ಸುದ್ದಿ, ಲಕ್ಕುಂಡಿ : ಇಲ್ಲಿಯ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘಕ್ಕೆ ಧಾರವಾಡ, ಗದಗ ಮತ್ತು ಉತ್ತರ ಕನ್ನಡ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟವು ಅತ್ಯುತ್ತಮ ಪ್ರಶಸ್ತಿಯನ್ನು ನೀಡಿ ಪ್ರೋತ್ಸಾಹಿಸಿತು.
ತೃತೀಯ ವಾರ್ಷಿಕ ಸಾಮಾನ್ಯ ಸಭೆಯಲ್ಲಿ ಸಂಘದ ಅಧ್ಯಕ್ಷೆ ಶಾರದಾ ಪಾಟೀಲ ಮತ್ತು ಕಾರ್ಯದರ್ಶಿ ಅನ್ನಪೂರ್ಣ ರಿತ್ತಿ ಪ್ರಶಸ್ತಿಯನ್ನು ಸ್ವೀಕರಿಸಿದರು. ಗ್ರಾಮ ಪಂಚಾಯತ ಮಟ್ಟದ ಸಂಜೀವಿನಿ ಯೋಜನೆಯ ಮಹಿಳಾ ಒಕ್ಕೂಟದ ಸಹಯೋಗದಲ್ಲಿ ಸ್ಥಾಪನೆಯಾದ ಮಹಿಳಾ ಸಂಘವು ಕೇವಲ ಎರಡು ವರ್ಷದಲ್ಲಿ ಅಧಿಕ ಹಾಲು ಉತ್ಪಾದನೆ ಮಾಡಿದ್ದಕ್ಕಾಗಿ ಒಕ್ಕೂಟದ ಅಧ್ಯಕ್ಷ ಶಂಕರ ಮುಗದ, ವ್ಯವಸ್ಥಾಪಕ ನಿರ್ದೇಶಕ ಡಾ. ವೀರೇಶ ತರಲಿ ಹಾಗೂ ಹನುಮಂತಗೌಡ್ರ ಹಿರೇಗೌಡ್ರ ಅವರು ಧಾರವಾಡ ಹಾಲು ಒಕ್ಕೂಟದ ನಂದಿನಿ ಸಭಾಭವನದಲ್ಲಿ ನಡೆದ ವಾರ್ಷಿಕ ಸಭೆಯಲ್ಲಿ ಪ್ರಶಸ್ತಿಯನ್ನು ನೀಡಿ ಗೌರವಿಸಿದರು. ಇದೇ ಸಂದರ್ಭದಲ್ಲಿ ಎಸ್.ಎಸ್.ಎಲ್.ಸಿಯಲ್ಲಿ ಹೆಚ್ಚು ಅಂಕ ಪಡೆದ ಸಂಘದ ಕಾರ್ಯದರ್ಶಿ ಅನ್ನಪೂರ್ಣ ರಿತ್ತಿಯವರ ಪುತ್ರ ಕಿರಣ ರಿತ್ತಿಗೆ 10 ಸಾವಿರ ರೂ ಚೆಕ್ ನೀಡಿ ಪುರಸ್ಕರಿಸಲಾಯಿತು.