ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ಪಟ್ಟಣದ ಶ್ರೀ ರಾಘವೇಂದ್ರಸ್ವಾಮಿಗಳ ಮಠದ ಬಳಿ ಶ್ರೀ ರಾಘವೇಂದ್ರ ಯುವಕ ಮಂಡಳದ ವತಿಯಿಂದ ಪ್ರತಿಷ್ಠಾಪಿಸಲಾದ ಲಕ್ಷ್ಮೇಶ್ವರದ ಸಾಮ್ರಾಟ್ ಗಣೇಶನ ಮೂರ್ತಿಯ ವಿಸರ್ಜನೆ ಕಾರ್ಯಕ್ರಮ ಸೆ. 22ರಂದು ಮಧ್ಯಾಹ್ನ 2 ಗಂಟೆಯಿಂದ ಬೃಹತ್ ಶೋಭಾಯಾತ್ರೆಯೊಂದಿಗೆ ನಡೆಯಲಿದೆ.
Advertisement
ಸಂಘಟನೆಯು ಕಳೆದ 27 ದಿವಸಗಳಿಂದ ಸಂಪ್ರದಾಯಬದ್ಧವಾಗಿ ಪೂಜೆ ನೆರವೇರಿಸುತ್ತಿದೆ. ಅನೇಕ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ.
ವಿಸರ್ಜನಾ ಮೆರವಣಿಗೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಪಾಲ್ಗೊಳ್ಳಬೇಕು ಎಂದು ಶ್ರೀ ರಾಘವೇಂದ್ರ ಯುವಕ ಸಂಘದ ಪ್ರಕಟಣೆ ವಿನಂತಿಸಿದೆ.